7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಲಿಯೋನೆಲ್ ಮೆಸ್ಸಿ
ಫುಟ್ ಬಾಲ್ ನ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ 7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.

ಪ್ಯಾರಿಸ್: ಫುಟ್ ಬಾಲ್ ನ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ 7 ನೇ ಬಾರಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.
ವಿಶ್ವದ ಅತ್ಯುತ್ತಮ ಆಟಗಾರ ವಿಭಾಗದಲ್ಲಿ ಮೆಸ್ಸಿಗೆ ಬ್ಯಾಲನ್ ಡಿ'ಓರ್ ಪ್ರಶಸ್ತಿ ಲಭ್ಯವಾಗಿದೆ. ಫ್ರಾನ್ಸ್ ನ ಫುಟ್ಬಾಲ್ ನಿಯತಕಾಲಿಕೆ ಬ್ಯಾಲನ್ ಡಿ'ಓರ್ ಪ್ರಶಸ್ತಿಯನ್ನು ನೀಡುತ್ತಿದ್ದು, ಮೆಸ್ಸಿ 2009 ರಿಂದ 2012 ವರೆಗೆ ಸತತವಾಗಿ ಪ್ರಶಸ್ತಿಯನ್ನು ಗಳಿಸಿದ್ದರು ನಂತರ 2015 ಮತ್ತು 2019 ರಲ್ಲಿ ಹಾಗೂ ಈಗ ಮೆಸ್ಸಿಗೆ ಪುನಃ ಈ ಪ್ರಶಸ್ತಿ ಒಲಿದಿದೆ.
ಎರಡು ವರ್ಷಗಳ ಹಿಂದೆ ಗೆದ್ದಿದ್ದ ಪ್ರಶಸ್ತಿಯೇ ಕೊನೆಯದಾಗಿರಲಿದೆ ಎಂದುಕೊಂಡಿದ್ದೆ. ಆದರೆ ಈ ಬಾರಿ ಪುನಃ ಪ್ರಶಸ್ತಿ ಗೆದ್ದಿರುವುದನ್ನು ಕೇಳಿ ಸಂತಸವಾಗುತ್ತಿದೆ ಎಂದು ಮೆಸ್ಸಿ ಪ್ರತಿಕ್ರಿಯೆ ನೀಡಿದ್ದಾರೆ.
ಬಾರ್ಸಿಲೋನಾ ಹಾಗೂ ಸ್ಪೇನ್ ವಿರುದ್ಧ ಅತ್ಯುತ್ತಮ ಆಟ ಆಡಿದ ಮಹಿಳಾ ಫುಟ್ಬಾಲ್ ಆಟಗಾರ್ತಿ ಅಲೆಕ್ಸಿಯಾ ಪುಟೆಲ್ಲಾಸ್ ಅವರಿಗೂ ಬ್ಯಾಲನ್ ಡಿ'ಓರ್ ಪ್ರಶಸ್ತಿ ಲಭ್ಯವಾಗಿದ್ದು, ಈ ಪ್ರಶಸ್ತಿ ಪಡೆದ ಮೂರನೇ ಮಹಿಳೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


