ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ, ನಾನು ಜೀವಂತವಾಗಿದ್ದೇನೆ: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ
ಹರಿಯಾಣದ ಸೋನೆಪತ್ ನ ಹಲಾಲ್‌ಪುರದಲ್ಲಿರುವ ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರ ಸಹೋದರನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಸೋನೆಪತ್: ನನ್ನ ಹಾಗೂ ನನ್ನ ಕುಟುಂಬದ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾನು ಮತ್ತು ನನ್ನ ಕುಟುಂಬ ಸುರಕ್ಷಿತವಾಗಿದೆ ಎಂದು ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರು ಬುಧವಾರ ಸ್ಪಷ್ಟನೆ ನೀಡಿದ್ದಾರೆ.
ಇದಕ್ಕೂ ಮುನ್ನ ಹರಿಯಾಣದ ಸೋನೆಪತ್ ನ ಹಲಾಲ್‌ಪುರದಲ್ಲಿರುವ ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ನಿಶಾ ಹಾಗೂ ಅವರ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಮಾಧ್ಯಮ ವರದಿಗಳನ್ನು ಗಮನಿಸಿದ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಿಶಾ ದಹಿಯಾ ಅವರು, ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಸುಳ್ಳು. ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾನು ಮತ್ತು ನನ್ನ ಕುಟುಂಬ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.
ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ನಿಜಕ್ಕೂ ಗುಂಡಿನ ದಾಳಿ ನಡೆದಿಯೇ? ಅಥವಾ ಇದು ಸುಳ್ಳು ಸದ್ದಿಯೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


