CWG 2022: ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಲವ್‌ಪ್ರೀತ್ ಸಿಂಗ್, ಭಾರತಕ್ಕೆ 14ನೇ ಪದಕ!
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ 109 ಕೆಜಿ ವಿಭಾಗದಲ್ಲಿ ಲವ್ ಪ್ರೀತ್ ಸಿಂಗ್ ಒಟ್ಟು 355 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಲವ್ ಪ್ರೀತ್ ಸ್ನ್ಯಾಚ್ ನಲ್ಲಿ 163 ಕೆಜಿ ಹಾಗೂ ಕ್ಲೀನ್ ಮತ್ತು ಜರ್ಕ್ ನಲ್ಲಿ 192 ಕೆಜಿ ಎತ್ತಿದ್ದರು.
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ.
ತಡರಾತ್ರಿ ನಡೆದ ಮಿಶ್ರ ಫೈನಲ್ ಪಂದ್ಯದಲ್ಲಿ ಭಾರತೀಯ ಬ್ಯಾಡ್ಮಿಂಟನ್ ಆಟಗಾರರಾದ ಕಿದಂಬಿ ಶ್ರೀಕಾಂತ್, ಚಿರಾಗ್ ಶೆಟ್ಟಿ, ಸಾತ್ವಿಕ್ ರಾಜ್ ರಂಕಿರೆಡ್ಡಿ, ಗಾಯಿತ್ರಿ ಗೋಪಿಚಂದ್ ಮತ್ತು ಜೋಲಿ ತ್ರೀಸಾ ಜೋಡಿ ಸೋಲು ಕಂಡಿತ್ತು. ಆದರೆ ಪಿವಿ ಸಿಂಧು ಮಾತ್ರ 22-20,21-17 ಸೆಟ್ ಗಳಿಂದ ಗೆಲುವು ಸಾಧಿಸಿದ್ದರು.
ಇದರೊಂದಿಗೆ ಭಾರತಕ್ಕೆ ಒಟ್ಟಾರೆ 14 ಪದಕಗಳು ಲಭಿಸಿವೆ. 5 ಚಿನ್ನ, 5 ಬೆಳ್ಳಿ ಮತ್ತು 4 ಕಂಚು ಸೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


