ಕ್ರೀಡೆ

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!

ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ.

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!
ಸುಧೀರ್-ಮುರಳಿ ಶ್ರೀಶಂಕರ್
Published On :

ಬರ್ಮಿಂಗ್​ಹ್ಯಾಮ್: ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. 

ಕಳೆದ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಈ ಮೂಲಕ ಭಾರತದ ಪದಕಗಳ ಸಂಖ್ಯೆ 20ಕ್ಕೇರಿದೆ. 87 ಕೆಜಿ ಇರುವ ಸುಧೀರ್ ತಮ್ಮ ಮೊದಲ ಪ್ರಯತ್ನದಲ್ಲಿ 208 ಕೆಜಿ ಭಾರ ಎತ್ತಿದರು. ಇನ್ನು ಎರಡನೇ ಪ್ರಯತ್ನದಲ್ಲಿ 212 ಕೆಜಿ ಎತ್ತಿ ದಾಖಲೆಯ 134.5 ಅಂಕಗಳನ್ನು ಗಳಿಸಿದರು. ಈ ಮೂಲಕ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಚಿನ್ನದ ಪದಕವನ್ನು ಗೆದ್ದು ಬೀಗಿದರು. 

ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ವಿಶೇಷ ಎಂದರೆ ಮುರಳಿ ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಬೆಳ್ಳಿ ಗೆದ್ದ ಭಾರತದ ಮೊದಲ ಕ್ರೀಡಾಪಟು ಆಗಿದ್ದಾರೆ. ಶ್ರೀಶಂಕರ್ 8.08ಮೀ ಜಿಗಿಯುವ ಮೂಲಕ ಪದಕ ಗೆದ್ದರು. ಇನ್ನು 1978ರಲ್ಲಿ ಸುರೇಶ್ ಬಾಬು ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದರು.

ಭಾರತೀಯ ಪುರುಷರ ಹಾಕಿ ತಂಡವು ವೇಲ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿದ್ದಾರೆ. ಸ್ಟಾರ್ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರ ಅಮೋಘ ಹ್ಯಾಟ್ರಿಕ್ ಹಿನ್ನಲೆಯಲ್ಲಿ ಭಾರತ ತನ್ನ ಕೊನೆಯ ಪೂಲ್ ಬಿ ಪಂದ್ಯದಲ್ಲಿ ವೇಲ್ಸ್ ತಂಡವನ್ನು 4-1 ಗೋಲುಗಳಿಂದ ಸೋಲಿಸಿತು. ಪೂಲ್ ಹಂತದಲ್ಲಿ ಭಾರತ 4 ಪಂದ್ಯಗಳ ಪೈಕಿ 3 ಪಂದ್ಯ ಗೆದ್ದಿದ್ದರೆ 1 ಡ್ರಾ ಆಗಿತ್ತು.

ಭಾರತಕ್ಕೆ ಒಟ್ಟಾರೆ 20 ಪದಕಗಳು ಒಲಿದಿದ್ದು 6 ಚಿನ್ನ, 7 ಬೆಳ್ಳಿ ಹಾಗೂ 7 ಕಂಚಿನ ಪದಕ ಸೇರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.