ಕ್ರೀಡೆ

CWG 2022: ಬ್ಯಾಡ್ಮಿಂಟನ್‌ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಪಿವಿ ಸಿಂಧುಗೆ ಚಿನ್ನ; ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಗೆ ಕಂಚು

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದಿದ್ದಾರೆ.

CWG 2022: ಬ್ಯಾಡ್ಮಿಂಟನ್‌ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಪಿವಿ ಸಿಂಧುಗೆ ಚಿನ್ನ; ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಗೆ ಕಂಚು
ಸಿಂಧು-ಲಕ್ಷ್ಯ ಸೇನ್
Published On :

ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದಿದ್ದಾರೆ. 

ಲಕ್ಷ್ಯ ಸೇನ್ , ಟ್ಜೆ ಯೋಂಗ್ ಎನ್‌ಜಿ ಅವರನ್ನು 19-21, 21-9, 21-16 ಸೆಟ್ ಗಳಿಂದ ಸೋಲಿಸಿದರು.    ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಗೆದ್ದಿದ್ದ ಯುವ ಆಟಗಾರ ಯೂತ್ ಒಲಿಂಪಿಕ್ ಗೇಮ್ಸ್ ಬೆಳ್ಳಿ ಪದಕ ವಿಜೇತರಾಗಿದ್ದು, ಈ ವರ್ಷದ ಆರಂಭದಲ್ಲಿ ಭಾರತದ ಐತಿಹಾಸಿಕ ಥಾಮಸ್ ಕಪ್ ಗೆಲುವಿನಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು.

ಇದಕ್ಕೂ ಮುನ್ನ ಮಹಿಳೆಯರ ಸಿಂಗಲ್ಸ್ ನಲ್ಲಿ ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ನೇರ ಸೆಟ್ ಗಳಿಂದ ಸೋಲಿಸಿದ್ದ ಪಿ.ವಿ ಸಿಂಧು ಚಿನ್ನದ ಪದಕ ಗೆದ್ದಿದ್ದರು. ಲಕ್ಷ್ಯ ಸೇನ್ ಗೆ ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಕಂಚಿನ ಪದಕ ಗೆದ್ದಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಇಲ್ಲಿಯವರೆಗೂ ಭಾರತಕ್ಕೆ ಒಟ್ಟು 58 ಪದಕಗಳು ಬಂದಿದ್ದು 20 ಚಿನ್ನ, 15 ಬೆಳ್ಳಿ ಹಾಗೂ 23 ಕಂಚು ಸೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.