ಕ್ರೀಡೆ

ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್: ಆನ್ಸ್ ಜಬ್ಯೋರ್ ರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟ ರಿಬಾಕಿನಾ

ವಿಂಬಲ್ಡನ್ ಮಹಿಳೆಯರ ಫೈನಲ್‌ನಲ್ಲಿ ಕಜಕಿಸ್ತಾನದ ಎಲೆನಾ ರೈಬಾಕಿನಾ ಅವರು ಟ್ಯುನೀಶಿಯಾದ ಆನ್ಸ್ ಜಬ್ಯೋರ್ ಅವರನ್ನು ಸೋಲಿಸುವ ಮೂಲಕ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್: ಆನ್ಸ್ ಜಬ್ಯೋರ್ ರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟ ರಿಬಾಕಿನಾ
ಎಲೆನಾ ರೈಬಾಕಿನಾ
Published On :

ಲಂಡನ್: ವಿಂಬಲ್ಡನ್ ಮಹಿಳೆಯರ ಫೈನಲ್‌ನಲ್ಲಿ ಕಜಕಿಸ್ತಾನದ ಎಲೆನಾ ರೈಬಾಕಿನಾ ಅವರು ಟ್ಯುನೀಶಿಯಾದ ಆನ್ಸ್ ಜಬ್ಯೋರ್ ಅವರನ್ನು ಸೋಲಿಸುವ ಮೂಲಕ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

ಸೆಂಟರ್ ಕೋರ್ಟ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಕಜಕಿಸ್ತಾನದ 17ನೇ ಶ್ರೇಯಾಂಕದ ರಿಬಾಕಿನಾ 3-6, 6-2, 6-2 ಸೆಟ್‌ಗಳಿಂದ ಮೂರನೇ ಶ್ರೇಯಾಂಕದ ಜಬ್ಯೋರ್ ಅವರನ್ನು ಸೋಲಿಸಿದರು. ಇದು ರಿಬಾಕಿನಾ ಅವರ ಮೊದಲ ಗ್ರ್ಯಾಂಡ್ ಸ್ಲಾಮ್ ಫೈನಲ್ ಆಗಿದ್ದು, ಅವರ ಮೂರನೇ ಪ್ರಶಸ್ತಿಯನ್ನು ಗೆದ್ದರು.

ರಷ್ಯಾದಲ್ಲಿ ಬೆಳೆದು ಕಜಕಿಸ್ತಾನದಲ್ಲಿ ನೆಲೆಸಿ ಆ ರಾಷ್ಟ್ರವನ್ನು ಪ್ರತಿನಿಧಿಸುತ್ತಿರುವ ಎಲೆನಾ ರಿಬಾಕಿನಾ 2019 ರ ಬುಕಾರೆಸ್ಟ್ ಮತ್ತು 2020 ಹೋಬರ್ಟ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.