ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಜಾವೆಲಿನ್‌ ಫೈನಲ್​ ತಲುಪಿದ ನೀರಜ್ ಚೋಪ್ರಾ

ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್‌ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಜಾವೆಲಿನ್‌ ಫೈನಲ್​ ತಲುಪಿದ ನೀರಜ್ ಚೋಪ್ರಾ
ನೀರಜ್ ಚೋಪ್ರಾ
Published On :

ಅಮೆರಿಕಾ: ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್‌ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

2022 ರಲ್ಲಿ ಟೋಕಿಯೊ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಭಾರತದ ಸ್ಟಾರ್ ಅಥ್ಲೀಟ್ ಫೈನಲ್‌ಗೆ ಅರ್ಹತೆ ಪಡೆಯಲು ಕೇವಲ 10 ಸೆಕೆಂಡುಗಳನ್ನಷ್ಟೇ ತೆಗೆದುಕೊಂಡರು ಎಂಬುದಿಲ್ಲಿ ವಿಶೇಷವಾಗಿದೆ.

ಚಾಂಪಿಯನ್‌ಷಿಪ್‌ನ ಅರ್ಹತಾ ಸುತ್ತಿನಲ್ಲಿ ಶುಕ್ರವಾರ 88.39 ಮೀಟರ್ಸ್ ಸಾಧನೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಫೈನಲ್‌ ತಲುಪಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ಜಾವೆಲಿನ್‌ ಥ್ರೊ ಫೈನಲ್ಸ್ ಭಾನುವಾರ ನಡೆಯಲಿದೆ.

ಶುಕ್ರವಾರ ನಡೆದ ಪುರುಷರ ಜಾವೆಲಿನ್ ಎಸೆತದ ಎ ಗುಂಪಿನ ಅರ್ಹತಾ ಸುತ್ತಿನಲ್ಲಿ ಚೋಪ್ರಾ ಸ್ಪರ್ಧಿಸಿದ್ದರು. ನಿಯಮಗಳ ಪ್ರಕಾರ, ಭಾನುವಾರದ ಫೈನಲ್‌ಗೆ ತಲುಪಲು 83.50 ಮೀಟರ್‌ಗಳ ಜಾವೆಲಿನ್ ಥ್ರೋ ಎಸೆಯುವ ಅಗತ್ಯವಿತ್ತು. ಫೈನಲ್​ಗೆ ಅಂತಿಮವಾಗಿ 12 ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಮಾತ್ರ ಅವಕಾಶ ಸಿಗುತ್ತದೆ. ಅದರಂತೆ ನಿನ್ನೆ ನಡೆದ ಅರ್ಹತಾ ಸುತ್ತಿನಲ್ಲಿ ಚೋಪ್ರಾ ಮೊದಲ ಪ್ರಯತ್ನದಲ್ಲೇ 88.39 ಮೀ. ಜಾವೆಲಿನ್​ ಎಸೆದು ಫೈನಲ್​ ತಲುಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.