ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿ
ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಭಾರತದ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಭಾರತದ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.
ಬರ್ಮಿಂಗ್ಹ್ಯಾಮ್‌ನ ಹೊಸದಾಗಿ ನವೀಕರಿಸಿದ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟನಾ ಸಮಾರಂಭ ನಡೆಯಲಿದೆ. 11 ದಿನಗಳ ಬಹು-ಕ್ರೀಡಾ ಕಾರ್ಯಕ್ರಮಕ್ಕೆ ನಾಳೆ ಅಧಿಕೃತ ಚಾಲನೆ ದೊರೆಯಲಿದೆ.
"ಉದ್ಘಾಟನಾ ಸಮಾರಂಭದ ಭಾರತ ತಂಡದ ಧ್ವಜಧಾರಿಯಾಗಿ ಪಿವಿ ಸಿಂಧು ಅವರನ್ನು ಹೆಸರಿಸಲಾಗಿದೆ" ಎಂದು ಭಾರತೀಯ ಒಲಿಂಪಿಕ್ ಸಂಸ್ಥೆಯ(ಐಒಎ) ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ನಾಳೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಒಟ್ಟು 164 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಭಾರತದಿಂದ ಒಟ್ಟು 215 ಅಥ್ಲೀಟ್‌ಗಳು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸ್ಪರ್ಧಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


