ಛತ್ತೀಸ್‌ಗಢ: ಪಂದ್ಯದ ವೇಳೆ ಗಾಯಗೊಂಡಿದ್ದ ಕಬಡ್ಡಿ ಆಟಗಾರನ ಸಾವು; ತಿಂಗಳಲ್ಲಿ ಇದು 3ನೇ ಸಾವು!
ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಪಂದ್ಯದ ವೇಳೆ ಗಂಭೀರ ಗಾಯಗೊಂಡಿದ್ದ 28 ವರ್ಷದ ಕಬಡ್ಡಿ ಆಟಗಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಶ್‌ಪುರ: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಪಂದ್ಯದ ವೇಳೆ ಗಂಭೀರ ಗಾಯಗೊಂಡಿದ್ದ 28 ವರ್ಷದ ಕಬಡ್ಡಿ ಆಟಗಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಛತ್ತೀಸ್‌ಗಢಿಯ ಒಲಿಂಪಿಕ್ಸ್‌ನ ಅಂಗವಾಗಿ ರಾಜ್ಯ ಸರ್ಕಾರ ಆಯೋಜಿಸಿದ್ದ ಕಬಡ್ಡಿ ಪಂದ್ಯಗಳಲ್ಲಿ ಭಾಗವಹಿಸಿದ ನಂತರ ಮೃತಪಟ್ಟ ಆಟಗಾರರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಅಕ್ಟೋಬರ್ 17ರಂದು ಜಶ್‌ಪುರದ ಸುಂಧ್ರು ಗ್ರಾಮದಲ್ಲಿ ನಡೆದ ಕಬಡ್ಡಿ ಪಂದ್ಯದ ವೇಳೆ ಗಾಯಗೊಂಡಿದ್ದ ಸಮರು ಕೆರ್ಕೆಟ್ಟಾ ನಿನ್ನೆ ಮಧ್ಯಾಹ್ನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಶ್‌ಪುರದ ಘುಮ್ರಾ ಗ್ರಾಮದ ಕೆರ್ಕೆಟ್ಟಾ ಅವರು ಬೆನ್ನುಹುರಿಗೆ ಗಂಭೀರವಾದ ಗಾಯದಿಂದ ಬಳಲುತ್ತಿದ್ದರು. ಆರಂಭದಲ್ಲಿ ಅವರನ್ನು ಸಮೀಪದಲ್ಲೇ ಇರುವ ತಪ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ನೆರೆಯ ರಾಯಗಢ ಜಿಲ್ಲೆಯ ಜಿಂದಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಸುಮಾರು ಒಂದು ತಿಂಗಳ ಚಿಕಿತ್ಸೆಯ ನಂತರ ಸಮರು ಸಾವನ್ನಪ್ಪಿದರು ಎಂದು ಅಧಿಕಾರಿ ಹೇಳಿದ್ದಾರೆ.
ಇದಕ್ಕೂ ಮುನ್ನ ಮಹಿಳಾ ಕಬ್ಬಡಿ ಆಟಗಾರ್ತಿ ಅಕ್ಟೋಬರ್ 15 ರಂದು ರಾಯ್‌ಪುರದ ಆಸ್ಪತ್ರೆಯಲ್ಲಿ ನಿಧನರಾದರು. ಇನ್ನು ರಾಯ್‌ಗಢ್ ಜಿಲ್ಲೆಯಲ್ಲಿ ನಡೆದ ಪಂದ್ಯದ ವೇಳೆ ತೀವ್ರವಾಗಿ ಗಾಯಗೊಂಡಿದ್ದ 32 ವರ್ಷದ ವ್ಯಕ್ತಿಯೊಬ್ಬರು ಅಕ್ಟೋಬರ್ 11ರಂದು ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


