ವಿಶ್ವ ಚಾಂಪಿಯನ್‌ಶಿಪ್: ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಕುಸ್ತಿಪಟು ಅಮನ್ ಸೆಹ್ರಾವತ್!
ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಸ್ಪೇನ್‌ನಲ್ಲಿ ನಡೆದ U23 ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ನವದೆಹಲಿ: ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಸ್ಪೇನ್‌ನಲ್ಲಿ ನಡೆದ U23 ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಫೈನಲ್‌ನಲ್ಲಿ ಟರ್ಕಿಯ ಕುಸ್ತಿಪಟು ಅಹ್ಮತ್ ಡುಮನ್ ವಿರುದ್ಧ 12-4 ಅಂತರದ ಗೆಲುವು ಸಾಧಿಸುವ ಮೂಲಕ 18 ವರ್ಷದ ಆಟಗಾರ ಈ ಅದ್ಭುತ ಸಾಧನೆ ಮಾಡಿದರು. ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ರವಿ ದಹಿಯಾ ಕೂಡ ಈ ಟೂರ್ನಿಯಲ್ಲಿ ಈ ಹಿಂದೆ ಬೆಳ್ಳಿ ಪದಕ ಗೆದ್ದಿದ್ದರು.
ಅಮನ್ ಈ ಮೊದಲು ಪ್ರೀ ಕ್ವಾರ್ಟರ್‌ನಲ್ಲಿ ಶ್ರೀಲಂಕಾದ ಹಂಸನಾ ಮಧುಶಂಕ ಅವರನ್ನು 11-0 ಮತ್ತು ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ತೋಶಿಯಾ ಅಬೆ ವಿರುದ್ಧ 13-2 ರಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದರು. ಸೆಮಿಫೈನಲ್‌ನಲ್ಲಿ ಅವರು ಕಿರ್ಗಿಸ್ತಾನ್‌ನ ಬೆಕ್‌ಜತ್ ಅಲ್ಮಾಜ್ ಅವರನ್ನು 10-5 ಅಂತರದಿಂದ ಸೋಲಿಸಿ ತಮ್ಮ ಪದಕವನ್ನು ಖಚಿತಪಡಿಸಿದರು. ಇದು U23 ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಆರನೇ ಪದಕವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


