ಕ್ರೀಡೆ

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್ ಗೆ ತಲೆ ಬಾಗಿದ ಕ್ರೊಯೇಷಿಯಾ, 6ನೇ ಬಾರಿಗೆ ಫೈನಲ್ ಪ್ರವೇಶಿಸಿದ ಅರ್ಜೆಂಟಿನಾ

ಫಿಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಲ್ಲಿ ಮಣಿಸಿ 6ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್ ಗೆ ತಲೆ ಬಾಗಿದ ಕ್ರೊಯೇಷಿಯಾ, 6ನೇ ಬಾರಿಗೆ ಫೈನಲ್ ಪ್ರವೇಶಿಸಿದ ಅರ್ಜೆಂಟಿನಾ
ಸಂಭ್ರಮದಲ್ಲಿ ಮೆಸ್ಸಿ
Published On :

ಕತಾರ್: ಫಿಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಲ್ಲಿ ಮಣಿಸಿ 6ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಮಂಗಳವಾರ ತಡರಾತ್ರಿ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲ್​ಗಳಿಂದ ಮಣಿಸಿದ ಅರ್ಜೆಂಟೀನಾ ಪ್ರಶಸ್ತಿ ಸುತ್ತಿಗೇರಿದ್ದು, ಈ ಮೂಲಕ ಅರ್ಜೆಂಟೀನಾ ತಂಡ ಆರನೇ ಬಾರಿ ವಿಶ್ವ ಕಪ್​ನ ಫೈನಲ್​ಗೇರಿದಂತಾಗಿದೆ. ಅಂತೆಯೇ ವೃತ್ತಿ ಜೀವನ ಕೊನೆಯ ವಿಶ್ವಕಪ್ ಟೂರ್ನಿಯನ್ನಾಡುತ್ತಿರುವ ಮೆಸ್ಸಿಗೆ ಪ್ರಶಸ್ತಿ ಗೆಲ್ಲುವ ಭರವಸೆ ಕೂಡ ಮೂಡಿದಂತಾಗಿದೆ.

ಅರ್ಜೆಂಟೀನಾ ತಂಡದ ಪರ ಜೂಲಿಯಾನ್​ ಅಲ್ವಾರೆಜ್​ (39 ಮತ್ತು 69ನೇ ನಿಮಿಷ) ಅವಳಿ ಗೋಲ್​ ಬಾರಿಸಿದರೆ, ಸ್ಟಾರ್​ ಆಟಗಾರ ಲಿಯೋನೆಲ್​ ಮೆಸ್ಸಿ (39ನೇ ನಿಮಿಷ) ಏಕೈಕ ಗೋಲ್​ ಬಾರಿಸಿದರು. 16ನೇ ಸುತ್ತಿನ ಪಂದ್ಯದಲ್ಲಿ ಜಪಾನ್​ ಹಾಗೂ ಕ್ವಾರ್ಟರ್​ಫೈನಲ್​ ಪಂದ್ಯದಲ್ಲಿ ಬಲಿಷ್ಠ ಬ್ರೆಜಿಲ್​ ತಂಡಕ್ಕೆ ಆಘಾತ ಕೊಟ್ಟು ಸೆಮಿ ಹಂತಕ್ಕೆ ಪ್ರವೇಶ ಪಡೆದಿದ್ದ ಕ್ರೊಯೇಷಿಯಾ ಬಳಗಕ್ಕೆ ಈ ಬಾರಿ ಅದ್ಭುತ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ರಕ್ಷಣಾ ವಿಭಾಗ ಹೆಚ್ಚು ಕಾರ್ಯಪ್ರವೃತ್ತವಾಗಿದ್ದ ಹೊರತಾಗಿಯೂ ಗೋಲ್​ ಬಾರಿಸಲು ವಿಫಲಗೊಂಡು ನಿರಾಸೆ ಎದುರಿಸಿತು.

ಪಂದ್ಯದ ಪ್ರಥಮಾರ್ಧ ಮುಕ್ತಾಯದ ವೇಳೆಗೆ 2-0 ಗೋಲ್​ಗಳ ಮುನ್ನಡೆ ಪಡೆದುಕೊಂಡ ಅರ್ಜೆಂಟೀನಾ ಬಳಗ, ದ್ವಿತೀಯಾರ್ಧದಲ್ಲೂ ಅದೇ ಮಾದರಿಯ ಆಟವನ್ನು ಮುಂದುವರಿಸಿ 69ನೇ ನಿಮಿಷದಲ್ಲಿ ಮತ್ತೊಂದು ಗೋಲ್​ ಹೊಡೆದು ವಿಜಯದ ಅಂತರವನ್ನು ಹೆಚ್ಚಿಸಿಕೊಂಡಿತು. ಬುಧವಾರ ರಾತ್ರಿ ನಡೆಯಲಿರುವ ಫ್ರಾನ್ಸ್ ಮತ್ತು ಮೊರಾಕ್ಕೊ ತಂಡಗಳ ನಡುವಿನ ಎರಡನೇ ಸೆಮಿಫೈನಲ್​ ಪಂದ್ಯದ ವಿಜೇತರು ಫೈನಲ್​ನಲ್ಲಿ ಅರ್ಜೆಂಟೀನಾಗೆ ಎದುರಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.