ಕ್ರೀಡೆ

ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ 

ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ 
ಭಾರತ ಹಾಕಿ ತಂಡ
Published On :

ಚೆನ್ನೈ: ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷಿಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಮೊದಲಾರ್ಧದಲ್ಲಿ ಮಲೇಷಿಯಾ ಆಕ್ರಮಣಕಾರಿ ಆಟವಾಡಿದ್ದರಿಂದ ಭಾರತೀಯರು ಎದುರಾಳಿಯನ್ನು ನಿರ್ಬಂಧಿಸಲು ಕಷ್ಟಪಟ್ಟರು. ಭಾರತ ಒಂಬತ್ತನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಜುಗ್ರಾಜ್ ಸಿಂಗ್  ನೆರವಿನೊಂದಿಗೆ ಮೊದಲ ಗೋಲು ಗಳಿಸಿತು. ಪಂದ್ಯ ಮುಂದುವರೆದಂತೆ ನಿಧಾನರಾದಂತೆ ಕಂಡುಬಂದ ಭಾರತೀಯ ಆಟಗಾರರು ತದನಂತರ ಆದ್ಬುತವಾಗಿ ಕಂಬ್ಯಾಕ್ ಮಾಡಿದರು. ಹರ್ಮನ್ ಪ್ರೀತ್ ಸಿಂಗ್ (45ನೇ ನಿಮಿಷ) ಗುರುಜಂತ್ ಸಿಂಗ್ (45ನೇ ನಿಮಿಷ) ಮತ್ತು ಆಕಾಶ್ ದೀಪ್ ಸಿಂಗ್ (56ನೇ ನಿಮಿಷ)ದಲ್ಲಿ ಗೋಲು ಗಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 

ಒಂದು ಹಂತದಲ್ಲಿ 3-3 ಗೋಲುಗಳಿಂದ ಎರಡು ತಂಡಗಳು ಸಮಾನ ಗೋಲುಗಳಿಸಿದಾಗ  ಮನ್‌ದೀಪ್ ಸಿಂಗ್ ಅವರಿಂದ ಪಾಸ್ ಪಡೆದ ಆಕಾಶದೀಪ್ ಸಿಂಗ್ ಮತ್ತೊಂದು ಗೋಲು ಗಳಿಸುವ ಮೂಲಕ ಭಾರತ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದರು. ಇದೇ ಕ್ರೀಡಾಂಗಣದಲ್ಲಿ ಭಾರತಕ್ಕೆ ದೊರೆತ ನಾಲ್ಕನೇ ಗೆಲುವು ಇದಾಗಿದೆ. ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.