ಕ್ರೀಡೆ

ಚುನಾವಣೆ ನಡೆಸಲು ವಿಫಲ: ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಫೆಡರೇಶನ್ (WFI) ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ಚುನಾವಣೆ ನಡೆಸಲು ವಿಫಲ: ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು
ಸಂಗ್ರಹ ಚಿತ್ರ
Published On :

ಚೆನ್ನೈ: ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಫೆಡರೇಶನ್ (WFI) ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲುವಲ್ಲಿ ಭಾರತದ ಕುಸ್ತಿ ಫೆಡರೇಶನ್ ವಿಫಲವಾದ ಹಿನ್ನೆಲೆಯಲ್ಲಿ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಈ ಕ್ರಮವನ್ನು ಕೈಗೊಂಡಿದೆ.

ಡಬ್ಲ್ಯುಎಫ್ಐ ವಿವಾದಗಳ ಸರಣಿಯಲ್ಲಿ ಸಿಲುಕಿಕೊಂಡಿದ್ದು, ಇದು ಅದರ ಚುನಾವಣೆಗಳನ್ನು ಪದೇ ಪದೇ ಮುಂದೂಡುವಂತೆ ಮಾಡಿದೆ.

ಭಾರತದ ಕುಸ್ತಿ ಆಡಳಿತ ಮಂಡಳಿಯಾಗಿರುವ WFI ಜೂನ್ 2023 ರಲ್ಲಿ ಚುನಾವಣೆಗಳನ್ನು ನಡೆಸಬೇಕಿತ್ತು. ಆದಾಗ್ಯೂ, ಭಾರತೀಯ ಕುಸ್ತಿಪಟುಗಳ ಸರಣಿ ಪ್ರತಿಭಟನೆಗಳು ಮತ್ತು ವಿವಿಧ ರಾಜ್ಯ ಘಟಕಗಳ ಕಾನೂನು ಅರ್ಜಿಗಳ ಕಾರಣದಿಂದಾಗಿ ಚುನಾವಣೆಗಳನ್ನು ಪದೇ ಪದೇ ಮುಂದೂಡಲಾಗಿದೆ.

ಭಾರತದ ಪ್ರಮುಖ ಕುಸ್ತಿಪಟುಗಳು ಅದರ ಕಾರ್ಯನಿರ್ವಹಣೆಯ ವಿರುದ್ಧ ಪ್ರತಿಭಟಿಸಿದ ನಂತರ ಹಾಗೂ ಅದರ ಆಗಿನ ಅಧ್ಯಕ್ಷ ಬ್ರಿಜ್ ಭೂಷಣ್, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದಾಗ ಡಬ್ಲ್ಯುಎಫ್ ಐ ಅನ್ನು ಮೊದಲು ಜನವರಿಯಲ್ಲಿ ಹಾಗೂ ನಂತರ ಮೇ ತಿಂಗಳಲ್ಲಿ ಅಮಾನತುಗೊಳಿಸಲಾಯಿತು.

ಡಬ್ಲ್ಯುಎಫ್ಐ ನ ದಿನನಿತ್ಯದ ವ್ಯವಹಾರಗಳನ್ನು ಪ್ರಸ್ತುತ ಭಾರತೀಯ ಒಲಿಂಪಿಕ್ ಅಸೋಸಿಯೇಶನ್-ರಚಿತವಾದ ಭೂಪೇಂದರ್ ಸಿಂಗ್ ಬಾಜ್ವಾ ನೇತೃತ್ವದ ನಿರ್ದಿಷ್ಟ ಉದ್ದೇಶಕ್ಕಾಗಿನ ಸಮಿತಿಯು ನಿರ್ವಹಿಸುತ್ತಿದೆ.

ಚುನಾವಣೆಗಳು ವಿಳಂಬವಾದರೆ ಅಮಾನತುಗೊಳಿಸುವುದಾಗಿ WFI ಗೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಈ ಹಿಂದೆ ಎಚ್ಚರಿಕೆ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.