ಕ್ರೀಡೆ

ಪ್ರಧಾನಿ ಮೋದಿ ಭೇಟಿ ಮಾಡಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ

ಇತ್ತೀಚಿಗೆ ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿರುವ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ
ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ - ಪ್ರಧಾನಿ ಮೋದಿ
Published On :

ನವದೆಹಲಿ: ಇತ್ತೀಚಿಗೆ ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿರುವ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 

ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ಕುಟುಂಬ ಸಮೇತ ಆಗಮಿಸಿದ ಪ್ರಜ್ಞಾನಂದ ಅವರು ಮೋದಿ ಅವರೊಂದಿಗೆ ಕೆಲವು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಮೋದಿ ಭೇಟಿ ಬಳಿಕ ಟ್ವೀಟ್ ಮಾಡಿರುವ ಪ್ರಜ್ಞಾನಂದ, ಸನ್ಮಾನ್ಯ ಪ್ರಧಾನಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿಯಾಗಿರುವುದು ದೊಡ್ಡ ಗೌರವ. ನನಗೆ ಮತ್ತು ನನ್ನ ಪೋಷಕರಿಗೆ ಅವರು ನೀಡಿದ ಪ್ರೋತ್ಸಾಹದ ಎಲ್ಲಾ ಮಾತುಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಇನ್ನು ಪ್ರಜ್ಞಾನಂದ ಅವರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಇವತ್ತು ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ನನ್ನ ನಿವಾಸಕ್ಕೆ ವಿಶೇಷ ಅತಿಥಿಗಳು ಆಗಮಿಸಿದ್ದರು. ನಿಮ್ಮ ಕುಟುಂಬದ ಜೊತೆ ನಿಮ್ಮನ್ನು ಭೇಟಿಯಾಗಿದ್ದು ಸಂತೋಷವಾಯಿತು. ನಿಮ್ಮ ಉತ್ಸಾಹ ಮತ್ತು ಪರಿಶ್ರಮವನ್ನು ನೀವು ನಿರೂಪಿಸಿದ್ದೀರಿ. ಭಾರತದ ಯುವಕರು ಯಾವುದೇ ಡೊಮೇನ್ ಅನ್ನು ಹೇಗೆ ಜಯಿಸಬಹುದು ಎಂಬುದಕ್ಕೆ ನೀವು ಉದಾಹರಣೆಯಾಗಿದ್ದೀರಿ. ನಿಮ್ಮ ಬಗ್ಗೆ ಹೆಮ್ಮೆಯಿದೆ ಪ್ರಜ್ಞಾನಂದ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.