ನವದೆಹಲಿ: ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ತೊರೆದ ವಿನೇಶ್ ಫೋಗಟ್!
ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿವಾದದ ನಡುವೆ ಪ್ರತಿಭಟನೆಯ ಸಂಕೇತವಾಗಿ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದರು.

ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿವಾದದ ನಡುವೆ ಪ್ರತಿಭಟನೆಯ ಸಂಕೇತವಾಗಿ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದರು.
ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ತನ್ನ ಪ್ರಶಸ್ತಿಗಳನ್ನು ಪ್ರಧಾನ ಮಂತ್ರಿ ಕಚೇರಿಯ ಹೊರಗೆ ಬಿಡಲು ಪ್ರಯತ್ನಿಸಿದರು. ಆದರೆ, ಆಕೆಯನ್ನು ಕರ್ತವ್ಯ ಪಥದಲ್ಲಿ ಪೊಲೀಸರು ತಡೆದರು. ಇದರಿಂದಾಗಿ ಫೋಗಟ್ ತನ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಬಿಡಲು ನಿರ್ಧರಿಸಿದರು. ನ್ಯಾಯಕ್ಕಾಗಿ ಹರಸಾಹಸ ಪಡುತ್ತಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಇಂತಹ ಗೌರವಗಳು ಅರ್ಥಹೀನವಾಗಿವೆ ಎಂದು ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.
ವಿನೇಶ್ ಅವರಿಗೆ 2020 ರಲ್ಲಿ ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನವನ್ನು ನೀಡಲಾಗಿತ್ತು. ಮತ್ತು ಅವರು 2016 ರಲ್ಲಿ ಅರ್ಜುನ ಪ್ರಶಸ್ತಿ ಪಡೆದಿದ್ದರು. ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಸರ್ಕಾರ ಅಮಾನತುಗೊಳಿಸಿದ ಹೊರತಾಗಿಯೂ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಡೆಫಿಲಂಪಿಕ್ಸ್ ಚಾಂಪಿಯನ್ ವೀರೇಂದ್ರ ಸಿಂಗ್ ಯಾದವ್ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಕೆಲವು ದಿನಗಳ ನಂತರ ಫೋಗಟ್ ಕೂಡಾ ಈ ನಿರ್ಧಾರ ಕೈಗೊಂಡಿದ್ದಾರೆ.
ಸಂಜಯ್ ಸಿಂಗ್ ಕಳೆದ ವಾರ ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಅವರು ಬ್ರಿಜ್ ಭೂಷಣ್ ಸಿಂಗ್ ಶರಣ್ ಅವರ ಸಹವರ್ತಿಯಾಗಿದ್ದರಿಂದ ಕುಸ್ತಿಪಟುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬ್ರಿಜ್ ಭೂಷಣ್ ಮೇಲೆ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರು ಹಲವಾರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ವರ್ಷದ ಆರಂಭದಲ್ಲಿ ಜಂತರ್ ಮಂತರ್‌ನಲ್ಲಿ ಸುದೀರ್ಘ ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸದ್ಯ ದೆಹಲಿ ನ್ಯಾಯಾಲಯದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


