ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'
ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಮೆಲ್ಬೋರ್ನ್: ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಭಾನುವಾರ ರಾಡ್ ಲೇವರ್ ಅರೆನಾದಲ್ಲಿ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಮುಖಾಮುಖಿಯಲ್ಲಿ ಜೊಕೊವಿಚ್ ಅವರು ಗ್ರೀಸ್‌ನ ಸ್ಟೆಫಾನೊಸ್ ಸಿಟ್ಸಿಪಸ್ ವಿರುದ್ಧ 6-3, 7-6 (7-4), 7-6 (7-5)ರ ಅಂತರದಲ್ಲಿ ಗೆಲುವು ದಾಖಲಿಸಿದರು. ಪಂದ್ಯದುದ್ಧಕ್ಕೂ ಎದುರಾಳಿ ವಿರುದ್ಧ ಸವಾರಿ ಮಾಡಿದ 35 ವರ್ಷದ ಜೊಕೊವಿಚ್ ನೂತನ ಇತಿಹಾಸ ಸೃಷ್ಟಿಸಿದರು.
ಈ ಗೆಲುವಿನ ಮೂಲಕ ಸ್ಪೇನ್‌ನ ರಫೆಲ್ ನಡಾಲ್ ಅವರ ದಾಖಲೆಯ 22 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಸಾಧನೆಯನ್ನು ಜಾಕೋವಿಚ್ ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೆ ದಾಖಲೆಯ 10ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ ಸ್ಲಾಮ್ ಟೂರ್ನಿ ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ.
ಕೊರೊನಾ ಲಸಿಕೆ ಹಾಕಿಸಿಕೊಳ್ಳದ ಕಾರಣ ಜೊಕೊವಿಚ್ ಅವರು ಕಳೆದ ಆವೃತ್ತಿಯ ಟೂರ್ನಿಯಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದರು. ಈ ಗೆಲುವಿನೊಂದಿಗೆ ಜೊಕೊವಿಚ್ ಅವರು ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ. 24 ವರ್ಷದ ಸಿಟ್ಸಿಪಸ್, 2021ರ ಫ್ರೆಂಚ್ ಓಪನ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದರು. ಆಗ ಪ್ರಶಸ್ತಿ ಸುತ್ತಿನಲ್ಲಿ ಜೊಕೊವಿಚ್ ಎದುರೇ ಸೋತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


