ಕೆನಡಾ ಓಪನ್ ಫೈನಲ್: ಚೀನಾದ ಬಲಿಷ್ಠ ಲೀ ಷೀ ಫೆಂಗ್ ಮಣಿಸಿ ಚಾಂಪಿಯನ್ ಆದ ಭಾರತದ ಲಕ್ಷ್ಯ ಸೇನ್
ಕೆನಡಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತದ ಲಕ್ಷ್ಯ ಸೇನ್ ಅವರು ಚೀನಾದ ಬಲಿಷ್ಠ ಲೀ ಶಿ ಫೆಂಗ್ ರನ್ನು ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಟೊರೆಂಟೂ: ಕೆನಡಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತದ ಲಕ್ಷ್ಯ ಸೇನ್ ಅವರು ಚೀನಾದ ಬಲಿಷ್ಠ ಲೀ ಶಿ ಫೆಂಗ್ ರನ್ನು ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.
ಚೀನಾದ ಲಿ ಶಿ ಫೆಂಗ್ ಅವರನ್ನು 18-21, 20-22 ನೇರ ಸೆಟ್‍ಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತದ ಲಕ್ಷ್ಯ ಸೇನ್ ಕ್ಯಾಲ್ಗೇರಿಯಲ್ಲಿ ನಡೆದ ಕೆನಡಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಸ್ಟಾರ್ ಆಟಗಾರ ಅತ್ಯುತ್ತಮ ಪ್ರದರ್ಶನ ನೀಡಿದ ಲಕ್ಷ್ಯ ಸೇನ್ ವರ್ಷದ ಮೊದಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಳೆದ ರಾತ್ರಿ ಕೆನಡಾ ಓಪನ್ ಫೈನಲ್ ಪಂದ್ಯದಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಲಿ ಶಿ ಫೆಂಗ್ ಅವರನ್ನು ನೇರ ಸೆಟ್‍ಗಳಲ್ಲಿ ಸೋಲಿಸುವ ಮೂಲಕ ಭಾರತದ ಸ್ಟಾರ್ ಷಟ್ಲರ್ ಲಕ್ಷ್ಯ ಸೇನ್ ಎಲ್ಲರನ್ನು ಚಕಿತಗೊಳಿಸಿದ್ದಾರೆ.
ಮೊದಲ ಸೆಟ್ ಅನ್ನು 21-18 ರಿಂದ ಗೆದ್ದುಕೊಂಡ ಅವರು 2ನೇ ಸೆಟ್‍ನಲ್ಲಿ 10ನೇ ಶ್ರೇಯಾಂಕದ ಶಿ ಫೆಂಗ್ ಹೋರಾಟ ನೀಡಿದರಾದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಎರಡನೇ ಸೆಟ್‍ನಲ್ಲಿ 16-20 ರಿಂದ ಹಿನ್ನಡೆ ಸಾಧಿಸಿದ್ದ ಲಕ್ಷ್ಯ ಸೇನ್ ಛಲ ಬಿಡದೆ ಸತತ ಆರು ಪಾಯಿಂಟ್‍ಗಳನ್ನು ಗೆದ್ದು ಅಂತಿಮವಾಗಿ ಪ್ರಶಸ್ತಿಯನ್ನು ತನ್ನತ್ತ ಸೆಳೆದರು.
ಕಳೆದ ವರ್ಷ ಇಂಡಿಯಾ ಓಪನ್ ಪ್ರಶಸ್ತಿ ಗೆದ್ದಿದ್ದ ಸೇನ್‍ಗೆ ಇದು ಎರಡನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


