ಕ್ರೀಡೆ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್: ಪ್ರಥಮ ಸ್ಥಾನ ಪಡೆದ ಅಭಿನವ್ ಬಳ್ಳಾರಿ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್: ಪ್ರಥಮ ಸ್ಥಾನ ಪಡೆದ ಅಭಿನವ್ ಬಳ್ಳಾರಿ
ಅಭಿನವ್ ಬಳ್ಳಾರಿ
Published On :

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಗಂಗಾವತಿಯ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ಈ ಚಾಂಪಿಯನ್ ಶಿಪ್ ನಲ್ಲಿ ೬೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಜ್ಯದ ವಿವಿಧ ಜಿಲ್ಲೆಯ ವಿವಿಧ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಿದ್ದರು.

ಧಾರವಾಡದ ಜೆಎಸ್ಎಸ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಅಭಿನವ್ ಬಳ್ಳಾರಿ ಶನಿವಾರ ನಡೆದ ಟ್ರೆಡಿಷನಲ್ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಸಂಸ್ಥೆಯ ಅಧ್ಯಕ್ಷರಾದ ಚಂದ್ರೇಗೌಡ ಪೊಲೀಸ್ ಪಾಟೀಲ್ ಹಾಗೂ ಕರಾಟೆ ತರಬೇತುದರಾದ ಧಾರವಾಡದ ವಿಠ್ಠಲ್ ಕಟ್ಟಿಮನಿ ಹಾಗೂ ಕರಾಟೆ ಶಿಕ್ಷಕರಾದ ಫಯಾಜ್, ಶಿಲ್ಪಾ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.