ಕ್ರೀಡೆ

ಕಳಪೆ ಪ್ರದರ್ಶನ: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ ಪಿವಿ ಸಿಂಧು ಹೊರಕ್ಕೆ

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಾರೆ ಪಿವಿ ಸಿಂಧು ಅವರ ಕಳಪೆ ಪ್ರದರ್ಶನ ಮುಂದುವರೆದಿದ್ದು ಇಂದು ನಡೆದ ಪಂದ್ಯದಲ್ಲಿ ಚೀನಾದ ಜಾಂಗ್ ಯಿ ಮಾನ್ ವಿರುದ್ಧ ನೇರ ಸೆಟ್ ಗಳಿಂದ ಸೋತಿದ್ದಾರೆ.

ಕಳಪೆ ಪ್ರದರ್ಶನ: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ ಪಿವಿ ಸಿಂಧು ಹೊರಕ್ಕೆ
ಪಿವಿ ಸಿಂಧು
Published On :

ಬರ್ಮಿಂಗ್‌ಹ್ಯಾಮ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಾರೆ ಪಿವಿ ಸಿಂಧು ಅವರ ಕಳಪೆ ಪ್ರದರ್ಶನ ಮುಂದುವರೆದಿದ್ದು ಇಂದು ನಡೆದ ಪಂದ್ಯದಲ್ಲಿ ಚೀನಾದ ಜಾಂಗ್ ಯಿ ಮಾನ್ ವಿರುದ್ಧ ನೇರ ಸೆಟ್ ಗಳಿಂದ ಸೋತಿದ್ದಾರೆ. 

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ವಿಶ್ವದ ಒಂಬತ್ತನೇ ಶ್ರೇಯಾಂಕಿತೆ ಹಾಗೂ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು ಅವರು ಜಾಂಗ್ ಯಿ ಮಾನ್ ವಿರುದ್ಧ 17-21, 11-21 ಅಂತರದಲ್ಲಿ ಸೋಲು ಕಂಡಿದ್ದು ಮೊದಲ ಸುತ್ತಿನಲ್ಲೇ ಟೂರ್ನಿಯಿಂದ ಹೊರಬಿದ್ದಿದ್ದಾರೆ. 

39 ನಿಮಿಷಗಳ ಕಾಲ ನಡೆದ . ಈ ವರ್ಷ ಸಿಂಧುಗೆ ಮೊದಲ ಸುತ್ತಿನಿಂದ ಮುಂದಕ್ಕೆ ಹೋಗಲು ಸಾಧ್ಯವಾಗದೇ ಇರುವುದು ಇದು ಮೂರನೇ ಬಾರಿ. ಅವರು ಜನವರಿಯಲ್ಲಿ ಮಲೇಷ್ಯಾ ಓಪನ್‌ನಲ್ಲಿ ಸ್ಪೇನ್‌ನ ಕ್ಯಾರೊಲಿನಾ ಮರಿನ್ ವಿರುದ್ಧ ಸೋತಿದ್ದರು. ಅದೇ ತಿಂಗಳಲ್ಲಿ ಇಂಡಿಯನ್ ಓಪನ್‌ನಲ್ಲಿ ಮೊದಲ ಸುತ್ತನ್ನು ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ.

ಪಿವಿ ಸಿಂಧು ಇತ್ತೀಚೆಗೆ ಕೊರಿಯಾದ ಕೋಚ್ ಪಾರ್ಕ್ ಟೇ-ಸಾಂಗ್ ಅವರಿಂದ ಬೇರ್ಪಟ್ಟಿದ್ದರು. ಆದರೆ ಅವರ ಮಾರ್ಗದರ್ಶನದಲ್ಲಿ ಸಿಂಧು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.