ವಿಶ್ವ ಬಿಲಿಯರ್ಡ್ಸ್: ಪಂಕಜ್ ಅಡ್ವಾಣಿಗೆ ವಿಶ್ವ ಚಾಂಪಿಯನ್ ಪಟ್ಟ
ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಅವರು ಮಂಗಳವಾರ ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ದೋಹಾ: ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಅವರು ಮಂಗಳವಾರ ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಇಂದು ದೋಹಾದಲ್ಲಿ ನಡೆದ ಫೈನಲ್‌ನಲ್ಲಿ ಬೆಂಗಳೂರಿನ ಪಂಕಜ್ ಅಡ್ವಾಣಿ ಅವರು, ಭಾರತದವರೇ ಆದ ಸೌರವ್ ಕೊಠಾರಿ ಅವರನ್ನು ಸೋಲಿಸುವ ಮೂಲಕ 26ನೇ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2005 ರಲ್ಲಿ ಮೊದಲ ಬಾರಿ ವಿಶ್ವ ಪ್ರಶಸ್ತಿ ಗೆದ್ದ ಪಂಕಜ್ ಅಡ್ವಾಣಿ ಅವರು ಈಗ ಒಂಬತ್ತನೇ ಬಾರಿಗೆ 'ಲಾಂಗ್ ಫಾರ್ಮ್ಯಾಟ್ ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಅಲ್ಲದೆ ಎಂಟು ಬಾರಿ 'ಪಾಯಿಂಟ್ ಫಾರ್ಮ್ಯಾಟ್' ಚಾಂಪಿಯನ್‌ಶಿಪ್‌ನಲ್ಲಿ ಜಯಗಳಿಸಿದ್ದಾರೆ ಮತ್ತು ಒಮ್ಮೆ ವಿಶ್ವ ಟೀಮ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


