ಅಕ್ಟೋಬರ್ 26 ರಂದು ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 26 ರಂದು ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶುಕ್ರವಾರ ತಿಳಿಸಿದ್ದಾರೆ.

ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 26 ರಂದು ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶುಕ್ರವಾರ ತಿಳಿಸಿದ್ದಾರೆ.
ರಾಜ್ಯ ಕ್ರೀಡಾ ಸಚಿವ ಗೋವಿಂದ್ ಗೌಡೆ ಮತ್ತು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ರಾಷ್ಟ್ರೀಯ ಕ್ರೀಡಾಕೂಟ ತಾಂತ್ರಿಕ ಸಮಿತಿ ಅಧ್ಯಕ್ಷ ಅಮಿತಾಭ್ ಶರ್ಮಾ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್, ಗೋವಾದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟವು ವಿಶಿಷ್ಟವಾಗಿರಲಿದೆ ಎಂದಿದ್ದಾರೆ.
ಫಟೋರ್ಡಾದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಅಕ್ಟೋಬರ್ 26 ರಂದು ಸಂಜೆ 6.30ಕ್ಕೆ ಪ್ರಧಾನಿ ಮೋದಿ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಗೋವಾ ಸಿಎಂ ತಿಳಿಸಿದ್ದಾರೆ.
43 ವಿವಿಧ ಕ್ರೀಡೆಗಳನ್ನು ಒಳಗೊಂಡ ಈ ಕ್ರೀಡಾಕೂಟ ಪಣಜಿ, ಮಾಪುಸಾ, ವಾಸ್ಕೋ, ಪೊಂಡಾ, ಮಾರ್ಗೋ ಮತ್ತು ಕೊಲ್ವಾ ಬೀಚ್‌ನಾದ್ಯಂತ 28 ಸ್ಥಳಗಳಲ್ಲಿ ನಡೆಯಲಿದೆ ಎಂದು ಸಾವಂತ್ ಹೇಳಿದ್ದಾರೆ.
10,000 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ಅವರಲ್ಲಿ ಶೇಕಡಾ 49.9 ರಷ್ಟು ಮಹಿಳಾ ಕ್ರೀಡಾಪಟುಗಳಿದ್ದಾರೆ ಎಂದು ಗೋವಾ ಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


