ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ.

ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ.
2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಪ್ಯಾರಾ ಅಥ್ಲೀಟ್ಗಳು ಮುರಿದಿದ್ದಾರೆ.
ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ.
ಪ್ರಧಾನಿ ಮೋದಿ ಮೆಚ್ಚುಗೆ
ಈ ನಡುವೆ ಈ ಮಹತ್ತರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್ಗಳಿಗೆ ಶುಭಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರತದ ಯುವಕರಿಗೆ ಅಸಾಧ್ಯವಾದದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿದಾಯಕ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


