Olympics 2024: 'ಚಕ್ ದೇ ಇಂಡಿಯಾ'; ಗ್ರೇಟ್ ಬ್ರಿಟನ್ ಮಣಿಸಿ ಸೆಮಿಫೈನಲ್ ಗೆ ಭಾರತ ಲಗ್ಗೆ
ಭಾರತ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಪಂದ್ಯವು ಪೂರ್ಣ ಸಮಯದವರೆಗೆ 1-1 ರಲ್ಲಿ ಸಮಬಲದಲ್ಲಿ ಉಳಿಯಿತು.

ಪ್ಯಾರಿಸ್ ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇಂದು ನಡೆದ ಕ್ವಾಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
ಪುರುಷರ ಹಾಕಿಯ ಮೊದಲ ಕ್ವಾರ್ಟರ್‌ಫೈನಲ್‌ನಲ್ಲಿ ಬ್ರಿಟನ್‌ನನ್ನು ಸೋಲಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಪಂದ್ಯವು ಪೂರ್ಣ ಸಮಯದವರೆಗೆ 1-1 ರಲ್ಲಿ ಸಮಬಲದಲ್ಲಿ ಉಳಿಯಿತು. ನಂತರ ಪೆನಾಲ್ಟಿ ಶೂಟೌಟ್ ನೀಡಲಾಯಿತು. ಅನುಭವಿ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಮತ್ತೊಮ್ಮೆ ಗೋಡೆಯಾಗಿ ನಿಂತರು. ಶೂಟೌಟ್‌ನಲ್ಲಿ ಭಾರತ 4-2 ಅಂತರದಲ್ಲಿ ಜಯ ಸಾಧಿಸಿದೆ.
ಮೊದಲ ಕ್ವಾರ್ಟರ್‌ನಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ 17ನೇ ನಿಮಿಷದಲ್ಲಿ ಅಮಿತ್ ರೋಹಿತ್‌ದಾಸ್‌ಗೆ ರೆಡ್ ಕಾರ್ಡ್ ನೀಡಿದ್ದರಿಂದ ಭಾರತಕ್ಕೆ ದೊಡ್ಡ ಪೆಟ್ಟು ಬಿದ್ದಿತು. ಅವರು ಮೈದಾನದಿಂದ ನಿರ್ಗಮಿಸಬೇಕಾಯಿತು. ಭಾರತವು 10 ಆಟಗಾರರೊಂದಿಗೆ ಉಳಿದ ಪಂದ್ಯವನ್ನು ಆಡಬೇಕಾಯಿತು. ಈ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಭಾರತದ ಖಾತೆ ತೆರೆದರು. 22ನೇ ನಿಮಿಷದಲ್ಲಿ ಅವರು ಗೋಲು ದಾಖಲಿಸಿದರು. ಇದು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹರ್ಮನ್‌ಪ್ರೀತ್ ಅವರ ಏಳನೇ ಗೋಲು. ಆದಾಗ್ಯೂ, ಸ್ವಲ್ಪ ಸಮಯದ ನಂತರ ಬ್ರಿಟನ್ ಒಂದು ಗೋಲು ಬಾರಿಸುವ ಮೂಲಕ ಸಮಬಲ ಸಾಧಿಸಿತು. 27ನೇ ನಿಮಿಷದಲ್ಲಿ ಲೀ ಮಾರ್ಟನ್ ಗೋಲು ಗಳಿಸಿದರು. ಹೀಗಾಗಿ ಪಂದ್ಯ ಟೈ ಆಯಿತು.
ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ ಇತಿಹಾಸವನ್ನು ಪುನರಾವರ್ತಿಸಿದೆ. 2021ರಲ್ಲಿ ಟೋಕಿಯೊದಲ್ಲಿ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಬ್ರಿಟನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶಿಸಿತ್ತು. ಆಗ ಭಾರತವು ಬ್ರಿಟನ್‌ನನ್ನು 3-1 ಗೋಲುಗಳಿಂದ ಸೋಲಿಸಿತ್ತು ಆದರೆ ಸೆಮಿಫೈನಲ್‌ನಲ್ಲಿ ಬೆಲ್ಜಿಯಂ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು. ಆದರೆ, ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತ ತಂಡ ಜರ್ಮನಿಯನ್ನು ಮಣಿಸಿ 41 ವರ್ಷಗಳ ಬರ ನೀಗಿಸಿತ್ತು. ಭಾರತ ಈಗ ಪ್ಯಾರಿಸ್‌ನಲ್ಲಿ ತನ್ನ ಪದಕದ ಬಣ್ಣವನ್ನು ಬದಲಾಯಿಸಲು ಪ್ರಯತ್ನಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



