Olympics 2024: ಕುಸ್ತಿಪಟು ರೀತಿಕಾ ಹೂಡಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ
ಕೊನೆಯ ದಿನದಂದು ಕುಸ್ತಿಪಟು ರೀತಿಕಾ ಹೂಡಾ ಅವರು ಉತ್ತಮ ಪ್ರದರ್ಶನ ನೀಡಿ, ಹಂಗೇರಿಯ ಬರ್ನಾಡೆಟ್ ನ್ಯಾಗಿ ಅವರ ವಿರುದ್ಧ 12-2 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ರಿತಿಕಾ ಹೂಡಾ ಅವರು ಮಹಿಳೆಯರ 76 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಮುಕ್ತಾಯದ ಹಂತ ತಲುಪುತ್ತಿದ್ದು, ಕೊನೆಯ ದಿನದಂದು ಕುಸ್ತಿಪಟು ರೀತಿಕಾ ಹೂಡಾ ಅವರು ಉತ್ತಮ ಪ್ರದರ್ಶನ ನೀಡಿ, ಹಂಗೇರಿಯ ಬರ್ನಾಡೆಟ್ ನ್ಯಾಗಿ ಅವರ ವಿರುದ್ಧ 12-2 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ರಿತಿಕಾ ಹೂಡಾ ಅವರಿಗೆ ಕ್ವಾರ್ಟರ್ ಫೈನಲ್ ನಲ್ಲಿ ಕಠಿಣ ಪೈಪೋಟಿ ಎದುರಾಗಲಿದ್ದು, ಅಗ್ರ ಶ್ರೇಯಾಂಕಿತೆ ಕಿರ್ಗಿಸ್ತಾನದ ಐಪೆರಿ ಮೆಡೆಟ್ ಅವರನ್ನು ಎದುರಿಸಬೇಕಾಗಿದೆ.
ಪುರುಷರ ಕುಸ್ತಿ ವಿಭಾಗದಲ್ಲಿ ಭಾರತದ ಏಕಮಾತ್ರ ಸ್ಪರ್ಧಿಯಾಗಿದ್ದ ಅಮನ್ ಸೆಹ್ರಾವತ್ ಅವರು ಶುಕ್ರವಾರ ಕಂಚಿನ ಪದಕ ಗೆದ್ದಿದ್ದಾರೆ. ಇದು ಈ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐದನೇ ಕಂಚು ಮತ್ತು ಆರನೇ ಒಟ್ಟಾರೆ ಪದಕವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



