Vinesh Phogat: ಪದಕ ನಿರ್ಧಾರ ಮತ್ತೆ ಮುಂದೂಡಿಕೆ; ವಿನೇಶ್ ಇನ್ನೆಷ್ಟು ದಿನ ಕಾಯಬೇಕು!
ವಿನೇಶ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಾತ್ರವಲ್ಲ. ಈ ಹಿಂದೆಯೂ ಎರಡು ಬಾರಿ ಆಘಾತ ಎದುರಾಗಿತ್ತು.

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರವನ್ನು ಇಂದು ಘೋಷಿಸಬೇಕಿತ್ತು. ಆದರೆ ಇದೀಗ ಮತ್ತೆ ತೀರ್ಪನ್ನು ಮತ್ತೆ ಮುಂದೂಡಲಾಗಿದೆ.
CAS ತನ್ನ ತೀರ್ಪು ಇಂದು ಭಾರತೀಯ ಕಾಲಮಾನ ರಾತ್ರಿ 9:30ಕ್ಕೆ ಕೊಡಬೇಕಿತ್ತು. ಆದರೆ ವಿಚಾರಣೆ ಪ್ರಕ್ರಿಯೆಗಳು ಮುಗಿದಿದ್ದರೂ ಈಗ ತೀರ್ಪು ಆಗಸ್ಟ್ 16ಕ್ಕೆ ಮುಂದೂಡಿದೆ.
ಫೈನಲ್‌ನ ಪಂದ್ಯಕ್ಕೂ ಮುನ್ನ 100 ಗ್ರಾಂ ಅಧಿಕ ತೂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವಿನೇಶ್ ಪೊಗಟ್ ರನ್ನು ಅನರ್ಹಗೊಳಿಸಲಾಗಿತ್ತು. ಹೀಗಾಗಿ ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಒತ್ತಾಯಿಸಿ ಮೇಲ್ಮನವಿ ಸಲ್ಲಿಸಿದ್ದರು.
ವಿನೇಶ್ ಗೆ ಮೂರನೇ ಬಾರಿಗೂ ಶಾಕ್
ವಿನೇಶ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಾತ್ರವಲ್ಲ. ಈ ಹಿಂದೆಯೂ ಎರಡು ಬಾರಿ ಆಘಾತ ಎದುರಾಗಿತ್ತು. ವಿನೇಶ್ ಅವರು 2016ರ ರಿಯೋ ಗೇಮ್ಸ್‌ನಲ್ಲಿ ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ್ದರು. 2016ರ ರಿಯೊ ಒಲಿಂಪಿಕ್ಸ್‌ನ ಕ್ವಾರ್ಟರ್-ಫೈನಲ್‌ನಲ್ಲಿ ಮೊಣಕಾಲಿನ ಗಾಯದಿಂದಾಗಿ ಅವರ ಪದಕದ ನಿರೀಕ್ಷೆಯು ಭಗ್ನಗೊಂಡಿತು. ಇದರ ನಂತರ, ಅವರು 2020ರಲ್ಲಿ ಟೋಕಿಯೊ ಒಲಿಂಪಿಕ್ಸ್‌ನ ಕ್ವಾರ್ಟರ್-ಫೈನಲ್‌ನಲ್ಲಿ 53 ಕೆಜಿ ವಿಭಾಗದಲ್ಲಿ ಸೋತಿದ್ದರು. ಈಗ 2024ರಲ್ಲಿ ಅವರು ಅಧಿಕ ತೂಕದ ಕಾರಣದಿಂದ ಹೊರಗುಳಿದಿದ್ದಾರೆ.
ವಿನೇಶ್ ಅವರ ತಂಡವು ಮಾರ್ಚ್ 7ರ ಸಂಜೆ ಸಿಎಎಸ್ ಅನ್ನು ಸಂಪರ್ಕಿಸಿತ್ತು. ವಿನೇಶ್ ಅವರ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಸ್ವೀಕರಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದೆ. ಆದರೆ ಭಾರತೀಯ ವಕೀಲರನ್ನು ನೇಮಿಸಲು ಸಾಧ್ಯವಾಗದ ಕಾರಣ ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಆದಾಗ್ಯೂ, ಸಿಎಎಸ್ ವಿನೇಶ್ ಅವರ ಬೇಡಿಕೆಯನ್ನು ಒಪ್ಪಿಕೊಂಡು ವಕೀಲರ ನೇಮಕಕ್ಕೆ ಕಾಲಾವಕಾಶ ನೀಡಿತ್ತು. ಹೀಗಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಇಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



