FIDE 2024: ಎರಡನೇ ಬಾರಿ ರಾಪಿಡ್ ಚೆಸ್ ವಿಶ್ವ ಚಾಂಪಿಯನ್ ಆದ ಕೊನೆರು ಹಂಪಿ
ಕೊನೆರು ಹಂಪಿ ಅವರ ಇಂದಿನ ಸಾಧನೆಯಿಂದ ಭಾರತ ಚೆಸ್ ನಲ್ಲಿ ಇನ್ನಷ್ಟು ಸಾಧನೆ ಮಾಡಿದೆ. ಇದಕ್ಕೂ ಮುನ್ನ ಡಿ ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಸಿಂಗಾಪುರದಲ್ಲಿ ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿದ್ದರು.

ನವದೆಹಲಿ: ಭಾರತದ ಗ್ರ್ಯಾಂಡ್ ಮಾಸ್ಟರ್ ಕೊನೆರು ಹಂಪಿ ಇಂದು ಭಾನುವಾರ ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಸೋಲಿಸುವ ಮೂಲಕ ವಿಶ್ವ ರ‍್ಯಾಪಿಡ್ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡರು. ಅವರು ಈ ಹಿಂದೆ 2019 ರಲ್ಲಿ ಜಾರ್ಜಿಯಾದಲ್ಲಿ ಪಂದ್ಯಾವಳಿಯನ್ನು ಗೆದ್ದು ಒಂದಕ್ಕಿಂತ ಹೆಚ್ಚು ಬಾರಿ ಪ್ರಶಸ್ತಿಯನ್ನು ಪಡೆದ ಚೀನಾದ ಜು ವೆನ್ಜುನ್ ಅವರ ಸಾಲಿಗೆ ಸೇರಿಕೊಂಡಿದ್ದಾರೆ.
ಕೊನೆರು ಹಂಪಿ ಅವರ ಇಂದಿನ ಸಾಧನೆಯಿಂದ ಭಾರತ ಚೆಸ್ ನಲ್ಲಿ ಇನ್ನಷ್ಟು ಸಾಧನೆ ಮಾಡಿದೆ. ಇದಕ್ಕೂ ಮುನ್ನ ಡಿ ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಸಿಂಗಾಪುರದಲ್ಲಿ ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿದ್ದರು. ಸೆಪ್ಟೆಂಬರ್‌ನಲ್ಲಿ ಬುಡಾಪೆಸ್ಟ್‌ನಲ್ಲಿ ನಡೆದ ಚೆಸ್ ಒಲಿಂಪಿಯಾಡ್‌ನಲ್ಲಿ ಮುಕ್ತ ಮತ್ತು ಮಹಿಳಾ ವಿಭಾಗಗಳಲ್ಲಿ ದೇಶವು ತನ್ನ ಮೊದಲ ಚಿನ್ನದ ಪದಕಗಳನ್ನು ಗೆದ್ದುಕೊಂಡಿತು. ಕೊನೆರು ಹಂಪಿ ಅವರು 11 ಅಂಕಗಳಲ್ಲಿ 8.5 ಅಂಕಗಳೊಂದಿಗೆ ಪಂದ್ಯಾವಳಿಯನ್ನು ಪೂರ್ಣಗೊಳಿಸಿದರು.
ಈ ಗೆಲುವು ತುಂಬಾ ಅನಿರೀಕ್ಷಿತವಾಗಿದೆ ಏಕೆಂದರೆ ಇಡೀ ವರ್ಷ ನಾನು ಸಾಕಷ್ಟು ಕಷ್ಟಪಡುತ್ತಿದ್ದೇನೆ. ಇದಕ್ಕೂ ಮುಂದಿನ ಪಂದ್ಯದಲ್ಲಿ ಸೋತಿದ್ದೇನೆ. ಇಂದಿನ ಗೆಲುವು ಅಚ್ಚರಿಯಾಗಿದೆ ಎಂದಿದ್ದಾರೆ.
ಭಾರತಕ್ಕೆ ಇದು ಉತ್ತಮ ಸಮಯ ಎಂದು ನಾನು ಭಾವಿಸುತ್ತೇನೆ. ನಮ್ಮಲ್ಲಿ ಗುಕೇಶ್ ವಿಶ್ವ ಚಾಂಪಿಯನ್ ಆಗಿದ್ದಾರೆ. ಈಗ ನಾನು ರ್ಯಾಪಿಡ್ ಪಂದ್ಯದಲ್ಲಿ ಎರಡನೇ ವಿಶ್ವ ಪ್ರಶಸ್ತಿಯನ್ನು ಪಡೆದುಕೊಂಡಿದ್ದೇನೆ. ಇದು ಬಹಳಷ್ಟು ಯುವಕರನ್ನು ವೃತ್ತಿಪರವಾಗಿ ಚೆಸ್ ನಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



