Paris Olympics 2024: ಹಾಕಿ ಗ್ರೂಪ್ ಸ್ಟೇಜ್ ನಲ್ಲಿ ಭಾರತ ಶುಭಾರಂಭ; ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ವಿರೋಚಿತ ಜಯ!
ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ.

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ.
ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಬಿ ಗುಂಪಿನ ತ ನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ಪ್ರಬಲ ನ್ಯೂಜಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು.
ಪಂದ್ಯದ ಆರಂಭದಲ್ಲಿ ನ್ಯೂಜಿಲೆಂಡ್ 8ನೇ ನಿಮಿಷದಲ್ಲಿ 1-0 ಮುನ್ನಡೆ ಪಡೆಯಿತು. 24ನೇ ಹಾಗೂ 34ನೇ ನಿಮಿಷದಲ್ಲಿ ಗೋಲು ಗಳಿಸಿದ ಭಾರತ 2-1 ಮುನ್ನಡೆ ಸಾಧಿಸಿತು. 53ನೇ ನಿಮಿಷದಲ್ಲಿ ಗೋಲು ಗಳಿಸಿದ ಕಿವೀಸ್ ಸ್ಕೋರನ್ನು 2-2ರಿಂದ ಸಮಬಲಗೊಳಿಸಿತು.
59ನೇ ನಿಮಿಷದಲ್ಲಿ ಗೆಲುವಿನ ಗೋಲು ಗಳಿಸಿದ ನಾಯಕ ಹರ್ಮನ್ಪ್ರೀತ್ ಸಿಂಗ್ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು.
ಭಾರತವು ಜುಲೈ 29ರಂದು ಬಿ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಅರ್ಜೆಂಟೀನ ತಂಡವನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



