ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಟಿ.ಕೆ. ಚತುನ್ನಿ ವಿಧಿವಶ
ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊಚ್ಚಿ: ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 7.45ರ ಸುಮಾರಿಗೆ ಕೊನೆಯುಸಿರೆಳೆದರು.
ಕೇರಳ ಮತ್ತು ಗೋವಾ ತಂಡದಲ್ಲಿ ಪ್ರತಿಷ್ಟಿತ ಸಂತೋಷ್ ಟ್ರೋಫಿ ಫುಟ್ಬಾಲ್ ಪಂದ್ಯದಲ್ಲಿ ಗೋಲ್ಕೀಪರ್ ಆಗಿ ಆಟವಾಡಿದ್ದರು. ಭಾರತೀಯ ಫುಟ್ಬಾಲ್ನ ಅತ್ಯುತ್ತಮ ತರಬೇತುದಾರರಲ್ಲಿ ಒಬ್ಬರಾದ ಚತುನ್ನಿ ಅವರು 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಐ.ಎಂ.ವಿಜಯನ್, ಬ್ರೂನೊ ಕುಟಿನ್ಹೊ, ಜೊ ಪಾಲ್ ಅಂಚೇರಿ, ಸಿ.ವಿ.ಪಾಪ್ಪಚ್ಚನ್ ಹಾಗೂ ಉ.ಶರಫಾಲಿಯಂತಹ ಪ್ರಖ್ಯಾತ ಫುಟ್ ಬಾಲ್ ಕ್ರೀಡಾಪಟುಗಳು ಸೇರಿದಂತೆ ಅಸಂಖ್ಯಾತ ಪ್ರತಿಭಾವಂತ ಆಟಗಾರರನ್ನು ರೂಪಿಸಿದ ಹಿರಿಮೆ ಅವರದಾಗಿತ್ತು.
1979 ರಲ್ಲಿ ಅವರು ಕೇರಳದ ಸಂತೋಷ್ ಟ್ರೋಫಿ ತಂಡದ ತರಬೇತುದಾರರಾಗಿದ್ದರು. ಜತೆಗೆ ಮೋಹನ್ ಬಗಾನ್, ಡೆಂಪೊ ಗೋವಾ ಮತ್ತು ಎಫ್ಸಿ ಕೊಚ್ಚಿನ್ ಸೇರಿದಂತೆ ಹಲವಾರು ಪ್ರಸಿದ್ಧ ತಂಡಗಳಿಗೆ ತರಬೇತಿ ನೀಡಿದ್ದರು. ಚತುನ್ನಿ ಅವರು ‘ಫುಟ್ಬಾಲ್ ಮೈ ಸೋಲ್’ ಎಂಬ ಆತ್ಮಚರಿತ್ರೆಯನ್ನೂ ಬರೆದಿದ್ದಾರೆ. ಚತುನ್ನಿ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



