Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!
ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ನವದೆಹಲಿ: ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಆಯ್ಕೆ ಪ್ರಯೋಗಗಳಿಗೆ ತನ್ನ ಮೂತ್ರದ ಮಾದರಿಯನ್ನು ಒದಗಿಸಲು ಪುನಿಯಾ ವಿಫಲರಾಗಿದ್ದರು. ಇದರಿಂದಾಗಿ ಭವಿಷ್ಯದ ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅವರನ್ನು ಅಮಾನತುಗೊಳಿಸುವ ಆದೇಶವನ್ನು ನಾಡಾ(NADA) ಹೊರಡಿಸಿದೆ ಎಂದು ತಿಳಿದುಬಂದಿದೆ.
ನಾಡಾದ ಈ ಕ್ರಮದಿಂದಾಗಿ ಇದೇ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆ ಉಂಟುಮಾಡಿದೆ ಎಂದು ತಿಳಿದುಬಂದಿದೆ.
“ನಾಡಾ 2021 ರ ಆರ್ಟಿಕಲ್ 7.4 ರ ಪ್ರಕಾರ, ಈ ವಿಷಯದಲ್ಲಿ ವಿಚಾರಣೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಯಾವುದೇ ಸ್ಪರ್ಧೆ ಅಥವಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ಬಜರಂಗ್ ಪುನಿಯಾ ಅವರನ್ನು ತಕ್ಷಣವೇ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ನಾಡಾ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ನಾಡಾ ವಿರುದ್ಧವೇ ಗಂಭೀರ ಆರೋಪ ಮಾಡಿದ್ದ ಕುಸ್ತಿಪಟು
ಕೆಲವು ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ)) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದರು. ಜತೆಗೆ ಸಾಕ್ಷ್ಯ ಸಮೇತವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದರು.
ನಾಡಾದ ಅಧಿಕಾರಿಗಳು ಬಜರಂಗ್ ಪುನಿಯಾ ಅವರ ಪರೀಕ್ಷೆಗಾಗಿ ಬಂದ ವೇಳೆ ಅವರ ಬಳಿಯಿದ್ದ ಉಪಕರಣಗಳು ಸಿರಿಂಜ್ ಮತ್ತು ಬಾಟಲಿಗಳನ್ನು ಬಜರಂಗ್ ಪರೀಕ್ಷಿಸಿದ್ದರು. ಈ ವೇಳೆ ಇವುಗಳೆಲ್ಲ ಅವಧಿ ಮೀರಿದ ಮತ್ತು ಹಳೆಯ ಉಪಕರಣ ಎನ್ನುವುದು ಬೆಳಕಿಗೆ ಬಂದಿತ್ತು. ತಕ್ಷಣ ಬಜರಂಗ್ ಇದನ್ನೆಲ್ಲ ವಿಡಿಯೊ ಮಾಡಿ ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಜತೆಗೆ ಕಳವಳ ಕೂಡ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



