Asian Champions Trophy: ಕೊರಿಯಾ ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತಕ್ಕೆ ಚೀನಾ ಎದುರಾಳಿ!
ಭಾರತ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು 4-1 ಅಂತರದ ಗೋಲುಗಳಿಂದ ಗೆದ್ದುಕೊಂಡಿದೆ. ಭಾರತದ ಪರ ನಾಯಕ ಹರ್ಮನ್ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದ್ದು ಒಟ್ಟಾರೆ ಟೂರ್ನಿಯಲ್ಲಿ 7 ಗೋಲು ದಾಖಲಿಸಿದ್ದಾರೆ.

ಹುಲುನ್ಬುಯರ್(ಚೀನಾ): ಭಾರತೀಯ ಪುರುಷರ ಹಾಕಿ ತಂಡವು 2024ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ಟಿಕೆಟ್ ಕಾಯ್ದಿರಿಸಿದೆ. ಭಾರತ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು 4-1 ಅಂತರದ ಗೋಲುಗಳಿಂದ ಗೆದ್ದುಕೊಂಡಿದೆ. ಭಾರತದ ಪರ ನಾಯಕ ಹರ್ಮನ್ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದ್ದು ಒಟ್ಟಾರೆ ಟೂರ್ನಿಯಲ್ಲಿ 7 ಗೋಲು ದಾಖಲಿಸಿದ್ದಾರೆ.
ಭಾರತದ ಪರ ನಾಯಕ ಹರ್ಮನ್ಪ್ರೀತ್ ಸಿಂಗ್ 19 ಮತ್ತು 45ನೇ ನಿಮಿಷದಲ್ಲಿ ಗೋಲು ಗಳಿಸಿದರು. ಇವರಲ್ಲದೆ ಉತ್ತಮ್ ಸಿಂಗ್ (13ನೇ ನಿಮಿಷ) ಮತ್ತು ಜರ್ಮನ್ಪ್ರೀತ್ ಸಿಂಗ್ (32ನೇ ನಿಮಿಷ) ತಲಾ ಒಂದು ಗೋಲು ಗಳಿಸಿದರು. ಕೊರಿಯಾ ಪರ ಯಾಂಗ್ ಜಿಹುನ್ (33ನೇ ನಿಮಿಷ) ಪೆನಾಲ್ಟಿ ಕಾರ್ನರ್ನಿಂದ ಏಕೈಕ ಗೋಲು ದಾಖಲಿಸಿದರು. ಮಂಗಳವಾರ ನಡೆಯಲಿರುವ ಫೈನಲ್ನಲ್ಲಿ ಭಾರತ ಆತಿಥೇಯ ಚೀನಾವನ್ನು ಎದುರಿಸಲಿದೆ.
ಲೀಗ್ ಹಂತದ ಪಂದ್ಯದಲ್ಲಿ ಭಾರತ 3-0 ಗೋಲುಗಳಿಂದ ಚೀನಾವನ್ನು ಸೋಲಿಸಿತ್ತು. ಇದಕ್ಕೂ ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಚೀನಾ ಶೂಟೌಟ್ ಮೂಲಕ 2-0 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ನಿಗದಿತ ಸಮಯದ ನಂತರ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿದವು. ಮೂರನೇ ಸ್ಥಾನಕ್ಕಾಗಿ ಪಾಕಿಸ್ತಾನ ಮತ್ತು ಕೊರಿಯಾ ತಂಡಗಳು ಮುಖಾಮುಖಿಯಾಗಲಿವೆ.

Asian Champions Trophy: ಬಲಿಷ್ಠ ಪಾಕ್ ತಂಡವನ್ನು ಶೂಟ್ಔಟ್ನಲ್ಲಿ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ತಲುಪಿದ ಚೀನಾ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


