Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!
2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಪ್ರೀತಿ ಪವಾರ್ ಅವರು, ಕೆನಡಾದ ಡೆಲ್ಗಾಡೊ ಸವನ್ನಾ ವಿರುದ್ಧ ಆರಂಭದಿಂದಲೇ ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪ್ರೀತಿ ಪವಾರ್ ಅವರ ಚೊಚ್ಚಲ ಪದಕ ಇದಾಗಿದೆ.
57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಜೈಸ್ಮಿನ್!
ಕಾಮನ್‌ವೆಲ್ತ್ ಗೇಮ್ಸ್ 2026ರ ಮಹಿಳೆಯರ 57 ಕೆಜಿ ವಿಭಾಗದ ಬಾಕ್ಸಿಂಗ್ ಫೈನಲ್‌ನಲ್ಲಿ ಭಾರತದ ಭರವಸೆಯ ಬಾಕ್ಸರ್ ಜೈಸ್ಮಿನ್ ಲ್ಯಾಂಬೋರಿಯಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ಅನುಭವಿ ಆಟಗಾರ್ತಿ ಮೈಕೆಲಾ ವಾಲ್ಶ್ ಅವರನ್ನು ಧೂಳಿಪಟ ಮಾಡಿದ ಜೈಸ್ಮಿನ್, ಭಾರತಕ್ಕೆ ಮತ್ತೊಂದು ಐತಿಹಾಸಿಕ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



