19 ತಿಂಗಳ ಪ್ರಶಸ್ತಿ ಬರಕ್ಕೆ ಬ್ರೇಕ್; ಜಪಾನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ ಸಿಂಧು
ಟೋಕಿಯೋದಲ್ಲಿ ನಡೆದ ಜಪಾನ್ ಓಪನ್ 2026 ರ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಅಕಾನೆ ಯಮಗುಚಿ ಅವರನ್ನು ಸೋಲಿಸುವ ಮೂಲಕ ಸಿಂಧು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ಈ ಪ್ರತಿಷ್ಠಿತ ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ.

ಟೋಕಿಯೋ (ಜಪಾನ್): ಗಾಯದ ಸಮಸ್ಯೆಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಫಾರ್ಮ್ ಕೊರತೆ ಎದುರಿಸುತ್ತಿದ್ದ, 2 ಬಾರಿಯ ಒಲಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಟೋಕಿಯೋದಲ್ಲಿ ನಡೆದ ಜಪಾನ್ ಓಪನ್ 2026 ರ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಅಕಾನೆ ಯಮಗುಚಿ ಅವರನ್ನು ಸೋಲಿಸುವ ಮೂಲಕ ಸಿಂಧು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ಈ ಪ್ರತಿಷ್ಠಿತ ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ.
ನೇರ ಸೆಟ್ಗಳ ಭರ್ಜರಿ ಜಯ
ಟೋಕಿಯೋ ಅಂಗಳದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಸಿಂಧು, ಜಪಾನ್ನ ಯಮಗುಚಿ ಅವರನ್ನು ಅಂತಿಮವಾಗಿ 21-17, 21-17 ರ ನೇರ ಗೇಮ್ಗಳಿಂದ ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಈ ಗೆಲುವಿನೊಂದಿಗೆ ಯಮಗುಚಿ ವಿರುದ್ಧ ಸಿಂಧು ಅವರ ಮುಖಾಮುಖಿ ದಾಖಲೆಯು 16-14 ಕ್ಕೆ ಏರಿಕೆಯಾಗಿದೆ.
ಜೊತೆಗೆ ಇದು ಪಿವಿ ಸಿಂಧು ಅವರ ವೃತ್ತಿಜೀವನದ ಮೊದಲ ಬಿಡಬ್ಲ್ಯೂಎಫ್ ಸೂಪರ್ 750 (BWF Super 750) ಪ್ರಶಸ್ತಿಯಾಗಿದೆ.
19 ತಿಂಗಳ ಪ್ರಶಸ್ತಿ ಬರಕ್ಕೆ ಬ್ರೇಕ್
ಸಿಂಧು ಅವರ ವೃತ್ತಿಜೀವನದಲ್ಲಿ ಈ ಗೆಲುವು ಅತ್ಯಂತ ಮಹತ್ವದ್ದಾಗಿದೆ. ಯಾಕಂದ್ರೆ, ಡಿಸೆಂಬರ್ 2024 ರ ಸೈಯದ್ ಮೋದಿ ಇಂಟರ್ನ್ಯಾಷನಲ್ ಟೂರ್ನಿಯ ಬಳಿಕ ಸಿಂಧು ಯಾವುದೇ ದೊಡ್ಡ ಪ್ರಶಸ್ತಿಯನ್ನು ಗೆದ್ದಿರಲಿಲ್ಲ. ಅದ್ರಂತೆ, ಸುಮಾರು 19 ತಿಂಗಳುಗಳ ಸುದೀರ್ಘ ಕಾಯುವಿಕೆಯ ನಂತರ ಈ ಪ್ರಶಸ್ತಿ ಒಲಿದಿದೆ. ಏತನ್ಮಧ್ಯೆ, 2019 ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ನಂತರ ಸಿಂಧು ಸಾಧಿಸಿದ ಅತ್ಯಂತ ದೊಡ್ಡ ಜಯ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



