ಕ್ರೀಡೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ!

ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕವನ್ನು ಖಚಿತಪಡಿಸಿತು.

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ!
ಮೀರಾಬಾಯಿ ಚಾನು
Published On :

ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕವನ್ನು ಖಚಿತಪಡಿಸಿತು. ಈ ಗೆಲುವಿನೊಂದಿಗೆ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕವನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಮೀರಾಬಾಯಿ ಚಾನು ಇತಿಹಾಸ ಸೃಷ್ಟಿ

ಮಹಿಳೆಯರ 48 ಕೆಜಿ ವಿಭಾಗದಲ್ಲಿ, ಮೀರಾಬಾಯಿ ಚಾನು 85 ಕೆಜಿ ಎತ್ತುವ ಮೂಲಕ ದಾಖಲೆ ಪುಸ್ತಕದಲ್ಲಿ ತಮ್ಮ ಹೆಸರನ್ನು ಬರೆದರು. ತನ್ನ ಮೂರನೇ ಪ್ರಯತ್ನದಲ್ಲಿ, ಮೀರಾಬಾಯಿ ಸುಲಭವಾಗಿ 85 ಕೆಜಿ ಎತ್ತುವ ಮೂಲಕ ಹೊಸ ಕಾಮನ್‌ವೆಲ್ತ್ ದಾಖಲೆಯನ್ನು ಸ್ಥಾಪಿಸಿದರು. ಮೊದಲು, ಅವರು 82 ಕೆಜಿ ಎತ್ತುವ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟ (CWG) ದಾಖಲೆ ಬರೆದರು. ನಂತರ 85 ಕಿಲೋಗ್ರಾಂಗಳಷ್ಟು ಎತ್ತುವ ಮೂಲಕ ಹೊಸ ಕಾಮನ್‌ವೆಲ್ತ್ ಕ್ರೀಡಾಕೂಟ ದಾಖಲೆಯನ್ನು ಸ್ಥಾಪಿಸಿದರು.

ಕಾಮನ್‌ವೆಲ್ತ್ ಕ್ರೀಡಾಕೂಟದ (CWG) ಇತಿಹಾಸದಲ್ಲಿ ಯಾವುದೇ ಕ್ರೀಡಾಪಟು ಎತ್ತಿದ ಅತ್ಯಧಿಕ ತೂಕ ಇದು. ಇದು ಕೇವಲ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಸೀಮಿತವಾಗಿಲ್ಲ. ಯಾವುದೇ ಪ್ರಮುಖ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ (ವಿಶ್ವ ಚಾಂಪಿಯನ್‌ಶಿಪ್‌ಗಳು, ಒಲಿಂಪಿಕ್ಸ್, ಇತ್ಯಾದಿ) ಕಾಮನ್‌ವೆಲ್ತ್ ದೇಶದ ಯಾವುದೇ ಕ್ರೀಡಾಪಟು ಸ್ಥಾಪಿಸಿದ ಅತ್ಯುನ್ನತ ದಾಖಲೆ ಇದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.