ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!
ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಯಾರಿಗೂ ಸಾಧ್ಯವಾಗದ ಅಪರೂಪದ ಸಾಧನೆಯನ್ನು ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ ಮಾಡಿದ್ದಾರೆ.

ಓಸ್ಲೋ: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದ ಅವರು ನಾರ್ವೆ ಚೆಸ್ ಟೂರ್ನಿಯ ಅಂತಿಮ ಸುತ್ತಿನ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಪ್ರತಿಷ್ಠಿತ ನಾರ್ವೆ ಚೆಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತದ ಮೊದಲ ಆಟಗಾರ ಎಂಬ ಹಿರಿಮೆ ಅವರದ್ದಾಗಿದೆ.
ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪ್ರಜ್ಞಾನಂದ, ನಿರ್ಣಾಯಕ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 18 ಅಂಕಗಳನ್ನು ಗಳಿಸಿ ಅಗ್ರಸ್ಥಾನಕ್ಕೇರಿದರು.
ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಯಾರಿಗೂ ಸಾಧ್ಯವಾಗದ ಅಪರೂಪದ ಸಾಧನೆಯನ್ನು ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ ಮಾಡಿದ್ದಾರೆ.
ಟೂರ್ನಿಯ ಆರಂಭದಲ್ಲಿ ಪ್ರಜ್ಞಾನಂದ ಅವರು ಆರು ಗಣ್ಯ ಆಟಗಾರರ ಎದುರು ನಿಧಾನಗತಿಯ ಮುನ್ನಡೆ ಪಡೆದಿದ್ದರು. ಆದರೆ, ಟೂರ್ನಿಯ ದ್ವಿತೀಯಾರ್ಧದಲ್ಲಿ ಭರ್ಜರಿ ವೇಗ ಪಡೆದುಕೊಂಡರು. ಏಳು ಬಾರಿಯ ನಾರ್ವೆ ಚೆಸ್ ಚಾಂಪಿಯನ್ ಮತ್ತು ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಎರಡು ಬಾರಿ ಸೋಲಿಸಿದ್ದಾರೆ.

0,0,W,0,W,W: ಲಾರ್ಡ್ಸ್ನಲ್ಲಿ ಅಬ್ಬರಿಸಿದ ಓಲಿ ರಾಬಿನ್ಸನ್; ವೈಭವ್ ಸೂರ್ಯವಂಶಿ ವಿಷಯ ಚರ್ಚೆ, ಯಾಕೆ ಗೊತ್ತಾ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


