ಕ್ರೀಡೆ

Asian Games 2026 Hockey: 28 ವರ್ಷಗಳ ಬಳಿಕ ಐತಿಹಾಸಿಕ ಜಯ; ಮತ್ತೆ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದ ಭಾರತ ಫೈನಲ್ ಗೆ ಲಗ್ಗೆ!

1998ರ ಬಳಿಕ ಇದೇ ಮೊದಲ ಬಾರಿಗೆ ಒಂದೇ ಆವೃತ್ತಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಫೈನಲ್ ಪ್ರವೇಶಿಸಿವೆ. ಇದೇ ವೇಳೆ, ಮಹಿಳಾ ಹಾಕಿ ತಂಡವೂ ನಾಳೆ ಫೈನಲ್‌ನಲ್ಲಿ ಚೀನಾ ಎದುರಿಸಲಿದೆ.

Asian Games 2026 Hockey: 28 ವರ್ಷಗಳ ಬಳಿಕ ಐತಿಹಾಸಿಕ ಜಯ; ಮತ್ತೆ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದ ಭಾರತ ಫೈನಲ್ ಗೆ ಲಗ್ಗೆ!
ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದ ಭಾರತ ಫೈನಲ್ ಗೆ ಲಗ್ಗೆ!
Published On :

ಕಕಾಮಿಗಹಾರಾ: ಏಷ್ಯನ್ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಶುಕ್ರವಾರ ಭಾರತಕ್ಕೆ ಮತ್ತೊಂದು ಐತಿಹಾಸಿಕ ಜಯ ದೊರೆತಿದ್ದು, ಪುರುಷರ ಹಾಕಿ ತಂಡ ಫೈನಲ್‌ ಪ್ರವೇಶಿಸಿದೆ.

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4-3 ಗೋಲುಗಳ ಅಂತರದಿಂದ ಮಣಿಸಿದ ಭಾರತ, ಏಷ್ಯನ್ ಗೇಮ್ಸ್ ಪುರುಷರ ಹಾಕಿ ಫೈನಲ್‌ಗೆ ಪ್ರವೇಶಿಸಿದೆ.

ಕಕಾಮಿಗಹಾರಾದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಕಿ ತಂಡದ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರ್ತಿಸಿದರು. ಪಂದ್ಯದ 5ನೇ ಹಾಗೂ 13ನೇ ನಿಮಿಷಗಳಲ್ಲಿ ಹರ್ಮನ್‌ಪ್ರೀತ್ ಗೋಲು ಬಾರಿಸಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು.

23ನೇ ನಿಮಿಷದಲ್ಲಿ ಸುಖಜೀತ್ ಸಿಂಗ್ ಫೀಲ್ಡ್ ಗೋಲು ಬಾರಿಸುವ ಮೂಲಕ ಭಾರತದ ಮುನ್ನಡೆಯನ್ನು ಹೆಚ್ಚಿಸಿದರು. ಬಳಿಕ ಪಾಕಿಸ್ತಾನ ತಿರುಗೇಟು ನೀಡಿದರೂ, ಭಾರತ ಕೊನೆಯವರೆಗೂ ಹೋರಾಟ ಮುಂದುವರಿಸಿತು.

ಪಂದ್ಯದ ಗತಿಯನ್ನೇ ಬದಲಿಸಿದ ನಿರ್ಣಾಯಕ ಗೋಲು

ಪಂದ್ಯದ ಅಂತಿಮ ನಿಮಿಷದಲ್ಲಿ ಅಭಿಷೇಕ್ ಫೀಲ್ಡ್ ಪ್ಲೇ ಮೂಲಕ ನಿರ್ಣಾಯಕ ಗೋಲು ಬಾರಿಸಿ ಭಾರತಕ್ಕೆ 4-3ರ ರೋಚಕ ಗೆಲುವು ತಂದುಕೊಟ್ಟರು.

28 ವರ್ಷಗಳ ಬಳಿಕ ಐತಿಹಾಸಿಕ ಜಯ

1998ರ ಬಳಿಕ ಇದೇ ಮೊದಲ ಬಾರಿಗೆ ಒಂದೇ ಆವೃತ್ತಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಫೈನಲ್ ಪ್ರವೇಶಿಸಿವೆ. ಇದೇ ವೇಳೆ, ಮಹಿಳಾ ಹಾಕಿ ತಂಡವೂ ನಾಳೆ ಫೈನಲ್‌ನಲ್ಲಿ ಚೀನಾವನ್ನು ಎದುರಿಸಲಿದೆ.

ಹಾಲಿ ಚಾಂಪಿಯನ್ ಭಾರತ, ದಕ್ಷಿಣ ಕೊರಿಯಾ ಹಾಗೂ ಮಲೇಷ್ಯಾ ನಡುವಿನ ಎರಡನೇ ಸೆಮಿಫೈನಲ್‌ನ ವಿಜೇತರನ್ನು ಶನಿವಾರ ನಡೆಯಲಿರುವ ಫೈನಲ್‌ನಲ್ಲಿ ಎದುರಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.