ಬೈಟುಕಾಫಿ

ಸದ್ಗುರು ಸಂಗೀತೋತ್ಸವ

Published On :

ಬೆಂಗಳೂರಿನ ಪ್ರತಿಷ್ಠಿತಸಂಗೀತ ಸಂಸ್ಥೆಯಾದ 'ಶ್ರೀ ಸದ್ಗುರು ಮ್ಯೂಸಿಕ್ ಅಕಾಡೆಮಿ' ತನ್ನ 20ನೆಯ ಸದ್ಗುರು ಸಂಗೀತೋತ್ಸವ ವನ್ನು ಹಮ್ಮಿ ಕೊಂಡಿದೆ. ಈ ಕಾರ್ಯಕ್ರಮವನ್ನು ಖ್ಯಾತ ಕವಿ ಎಂ.ಎನ್.  ವ್ಯಾಸರಾವ್ ಉದ್ಘಾಟಿಸುವರು. ಪಂ. ವಿ.ಎಂ. ನಾಗರಾಜ್, ಪಂ. ಮೃತ್ಯುಂಜಯ ಶೆಟ್ಟರ್, ಲಹರಿವೇಲು ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಮನು ಬಳಿಗಾರ್ ವಹಿಸುವರು. ಇದೇ ಸಂದರ್ಭದಲ್ಲಿ ನಮ್ಮ ನಾಡಿನ  ಖ್ಯಾತ ತಬಲಾ ವಾದಕರಾದ ಪಂ. ಎನ್.ಎಸ್ ಗುಂಡಾಶಾಸ್ತ್ರಿಯವರಿಗೆ 'ನಾದಶ್ರೀ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ಸಂದರ್ಭದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ತಬಲಾ ವಾದನ, ಕೀಬೋರ್ಡ್ ವಾದನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.
ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.
ರಸ್ತೆ, ಬೆಂಗಳೂರು.
ಸಮಯ: ಸಂಜೆ 4 ಗಂಟೆ.
ದಿನಾಂಕ: 13.04.2013 ಶನಿವಾರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.