ಭೀಕರ ಅಪಘಾತ 7 ಜನರ ಸಾವು
ಟೆಂಪೋ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ...
ಬೀದರ್: ಟೆಂಪೋ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮರಕುಂದಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಮಂಗಳವಾರ ನಡೆದಿದೆ.
ಮೃತಪಟ್ಟವರೆಲ್ಲರೂ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಖಾಸರಗಾಂವ್ ಗ್ರಾಮವದವರಾಗಿದ್ದು, ತಿರುಪತಿ ದರ್ಶನ ಪಡೆದುಕೊಂಡು ಟೆಂಪೋದಲ್ಲಿ ವಾಪಸಾಗುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬೆಮಳಖೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಅಮರನಾಥ ರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

