ಪ್ರಧಾನ ಸುದ್ದಿ

ಯೋಧ ಜಯರಾಮೇಗೌಡ ಅಂತ್ಯಸಂಸ್ಕಾರ

Published On :

ಅಗ್ರಹಾರಬಾಚಹಳ್ಳಿ (ಕೆ.ಆರ್.ಪೇಟೆ):  ಅಸ್ಸಾಂನ ಭಾರತ-ಬಾಂಗ್ಲ ಗಡಿಯ ಸುರ್ಮಾ ನದಿಯಲ್ಲಿ ದೋಣಿ ಮಗುಚಿ ಮೃತಪಟ್ಟ ಗಡಿಭದ್ರತಾ ಪಡೆ ಯೋಧ ಜಯರಾಮೇಗೌಡ ಅವರ ಅಂತ್ಯಸಂಸ್ಕಾರ ಅವರ ಹುಟ್ಟುರಾದ ಅಗ್ರಹಾರ ಬಾಚಹಳ್ಳಿ ಗ್ರಾಮದಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಗ್ರಾಮದ ಹೊರವಲಯದ ಮಲ್ಲಸಮುದ್ರ ಕೆರೆ ಸಮೀಪದ ತೋಟದಲ್ಲಿ ಮಧ್ಯಾಹ್ನ 1.45ರ ಸಮಯದಲ್ಲಿ ಜಯರಾಮೇಗೌಡ ಅವರ ಪಾರ್ಥೀವ ಶರೀರ ಹೂಳುವುದಕ್ಕೂ ಮುನ್ನ ರಾಷ್ಟ್ರಧ್ವಜ ಹೊದಿಸಿ, ಗಡಿಭದ್ರತಾ ಪಡೆ ಯೋಧರು ಮೂರು ಸುತ್ತು ಕುಶಾಲುತೋಪು ಹಾರಿಸಿ ಸರ್ಕಾರಿ ಗೌರವ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.