ಪ್ರಧಾನ ಸುದ್ದಿ

ಲಗಾಮು ಸಿದ್ದ

ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ಸಿದ್ದರಾಮಯ್ಯ ಅವರಿಗೆ ಲಗಾಮು ಹಾಕುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಇನ್ನು...

Published On :

ಕನ್ನಡಪ್ರಭ ವಾರ್ತೆ  ಬೆಂಗಳೂರು  ಜು. 13
ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ಸಿದ್ದರಾಮಯ್ಯ ಅವರಿಗೆ ಲಗಾಮು ಹಾಕುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಇನ್ನು ಎರಡು ಸಮಿತಿಗಳು ಗಮನಿಸುತ್ತಲೇ ಇರುತ್ತದೆ. ಯಾವುದೇ ಯೋಜನೆ, ಘೋಷಣೆಗಳು ಸಮಿತಿಯ ಒಪ್ಪಿಗೆ ನಂತರವೇ ಆಗಲಿವೆ.
ಸರ್ಕಾರದ ಕಾರ್ಯವೈಖರಿ ಹೇಗಿರಬೇಕು, ನೀತಿನಿರೂಪಣೆ ಕುರಿತು ಕಾಲಕಾಲಕ್ಕೆ ಈ ಸಮಿತಿಗಳು ಸಲಹೆ ನೀಡುತ್ತವೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ಮಧ್ಯೆ ಹೊಂದಾಣಿಕೆ ಮೂಡಿಸಲು ಸಮನ್ವಯ ಸಮಿತಿ ಹಾಗೂ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಲು ಪ್ರಣಾಳಿಕೆ ಅನುಷ್ಠಾನ ಸಮಿತಿ ರಚನೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಂಕಿತವೊಂದೇ ಬಾಕಿ ಇದೆ.
ಸಮನ್ವಯ ಸಮಿತಿ ಮತ್ತು ಪ್ರಣಾಳಿಕೆ ಅನುಷ್ಠಾನ ಸಮಿತಿಗಳಿಗೆ ಎಐಸಿಸಿ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೇ ಅಧ್ಯಕ್ಷರಾಗಿರುತ್ತಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಸಂಚಾಲಕರಾಗಿರುತ್ತಾರೆ. ಇವರು ಸೇರಿದಂತೆ ಸಮನ್ವಯ ಸಮಿತಿಯಲ್ಲಿ ಆರು ಮಂದಿ ಹಾಗೂ ಪ್ರಣಾಳಿಕೆ ಅನುಷ್ಠಾನ ಸಮಿತಿಯಲ್ಲಿ ಎಂಟು ಮಂದಿ ಸದಸ್ಯರಿರುತ್ತಾರೆ.
ಸಮನ್ವಯ ಸಮಿತಿಯಲ್ಲಿ ದಿಗ್ವಿಜಯ್ ಸಿಂಗ್ ಅವರ ಜತೆಗೆ ಎಐಸಿಸಿ ಕಾರ್ಯದರ್ಶಿ ಸೆಲ್ವಕುಮಾರ್,  ಡಾ.ಜಿ. ಪರಮೇಶ್ವರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರದಿಂದ ಒಬ್ಬರು ಮತ್ತು ವಿಧಾನಸಭೆಯಿಂದ ಒಬ್ಬ ಸದಸ್ಯರಿರುತ್ತಾರೆ. ಈ ಎರಡು ಸ್ಥಾನಗಳಿಗಾಗಿ ಹಲವು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.
ಅದೇ ರೀತಿ ಪ್ರಣಾಳಿಕೆ ಸಮಿತಿಯಲ್ಲಿ ದಿಗ್ವಿಜಯ್ ಸಿಂಗ್, ಸೆಲ್ವಕುಮಾರ್, ಡಾ.ಜಿ. ಪರಮೇಶ್ವರ, ಸಿದ್ದರಾಮಯ್ಯ ಅವರ ಜತೆಗೆ ವಿಧಾನಸಭೆ, ವಿಧಾನ ಪರಿಷತ್, ಎಐಸಿಸಿ ಮತ್ತು ಪಕ್ಷದಿಂದ ತಲಾ ಒಬ್ಬರು ಇರುತ್ತಾರೆ.
ಸದ್ಯ ಎರಡೂ ಸಮಿತಿಯ ಸದಸ್ಯರ ಪಟ್ಟಿಯನ್ನು ಸೋನಿಯಾ ಗಾಂಧಿ ಅವರಿಗೆ ರವಾನಿಸಲಾಗಿದ್ದು, ಅದರೊಂದಿಗೆ ಡಾ. ಪರಮೇಶ್ವರ ಅವರು ಕೆಲವು ಹೆಸರುಗಳನ್ನೂ ಶಿಫಾರಸು ಮಾಡಿದ್ದಾರೆ. ಅವರು ಸಮನ್ವಯ ಸಮಿತಿಗೆ ಇಬ್ಬರು ಮತ್ತು ಪ್ರಣಾಳಿಕೆ ಅನುಷ್ಠಾನ ಸಮಿತಿಗೆ ನಾಲ್ವರು ಸದಸ್ಯರ ಹೆಸರನ್ನು ಅಂತಿಮಗೊಳಿಸಿ ಸಮಿತಿ ರಚನೆಗೆ ತಮ್ಮ ಅಂಕಿತ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರಿಷ್ಠರ ಜತೆ ಸಮಾಲೋಚನೆ: ದೆಹಲಿಯಲ್ಲಿರುವ ಡಾ.ಜಿ. ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಸಮಿತಿ ರಚನೆ ಕುರಿತಂತೆ ದಿಗ್ವಿಜಯ್ ಸಿಂಗ್ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದ್ದಾರೆ. ಸಮಿತಿಯ ಕಾರ್ಯವೈಖರಿ ಮತ್ತು ರೂಪುರೇಷೆಗಳನ್ನು ಅಂತಿಮಗೊಳಿಸಿದ್ದಾರೆ.
ಲಭ್ಯ ಮಾಹಿತಿ ಪ್ರಕಾರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ ಅಥವಾ ಸಮನ್ವಯ ಸಮಿತಿ ಗಮನಕ್ಕೆ ತಾರದೆ ಯಾವುದೇ ಘೋಷಣೆಗಳನ್ನು ಮಾಡುವಂತಿಲ್ಲ. ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಾದರೂ ಅದನ್ನು ಸಮನ್ವಯ ಸಮಿತಿಯಲ್ಲಿ ಮೊದಲು ಚರ್ಚಿಸಬೇಕು. ಸಮಿತಿಯಲ್ಲಿ ಒಮ್ಮತಾಭಿಪ್ರಾಯ ಮೂಡಿದ ಬಳಿಕವೇ ಅದನ್ನು ಪ್ರಕಟಿಸಬೇಕು. ಇಲ್ಲದೇ ಇದ್ದರೆ ಅದು ಶಿಸ್ತಿನ ಉಲ್ಲಂಘನೆಯಾಗುತ್ತದೆ.  

ಅದೇ ರೀತಿ ಪ್ರಣಾಳಿಕೆ ಸಮಿತಿಯಲ್ಲಿ ದಿಗ್ವಿಜಯ್ ಸಿಂಗ್, ಸೆಲ್ವಕುಮಾರ್, ಡಾ.ಜಿ. ಪರಮೇಶ್ವರ, ಸಿದ್ದರಾಮಯ್ಯ ಅವರ ಜತೆಗೆ ವಿಧಾನಸಭೆ, ವಿಧಾನ ಪರಿಷತ್, ಎಐಸಿಸಿ ಮತ್ತು ಪಕ್ಷದಿಂದ ತಲಾ ಒಬ್ಬರು ಇರುತ್ತಾರೆ.
ಸದ್ಯ ಎರಡೂ ಸಮಿತಿಯ ಸದಸ್ಯರ ಪಟ್ಟಿಯನ್ನು ಸೋನಿಯಾ ಗಾಂಧಿ ಅವರಿಗೆ ರವಾನಿಸಲಾಗಿದ್ದು, ಅದರೊಂದಿಗೆ ಡಾ. ಪರಮೇಶ್ವರ ಅವರು ಕೆಲವು ಹೆಸರುಗಳನ್ನೂ ಶಿಫಾರಸು ಮಾಡಿದ್ದಾರೆ. ಅವರು ಸಮನ್ವಯ ಸಮಿತಿಗೆ ಇಬ್ಬರು ಮತ್ತು ಪ್ರಣಾಳಿಕೆ ಅನುಷ್ಠಾನ ಸಮಿತಿಗೆ ನಾಲ್ವರು ಸದಸ್ಯರ ಹೆಸರನ್ನು ಅಂತಿಮಗೊಳಿಸಿ ಸಮಿತಿ ರಚನೆಗೆ ತಮ್ಮ ಅಂಕಿತ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರಿಷ್ಠರ ಜತೆ ಸಮಾಲೋಚನೆ: ದೆಹಲಿಯಲ್ಲಿರುವ ಡಾ.ಜಿ. ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಸಮಿತಿ ರಚನೆ ಕುರಿತಂತೆ ದಿಗ್ವಿಜಯ್ ಸಿಂಗ್ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದ್ದಾರೆ. ಸಮಿತಿಯ ಕಾರ್ಯವೈಖರಿ ಮತ್ತು ರೂಪುರೇಷೆಗಳನ್ನು ಅಂತಿಮಗೊಳಿಸಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ ಅಥವಾ ಸಮನ್ವಯ ಸಮಿತಿ ಗಮನಕ್ಕೆ ತಾರದೆ ಯಾವುದೇ ಘೋಷಣೆಗಳನ್ನು ಮಾಡುವಂತಿಲ್ಲ. ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಾದರೂ ಅದನ್ನು ಸಮನ್ವಯ ಸಮಿತಿಯಲ್ಲಿ ಮೊದಲು ಚರ್ಚಿಸಬೇಕು. ಸಮಿತಿಯಲ್ಲಿ ಒಮ್ಮತಾಭಿಪ್ರಾಯ ಮೂಡಿದ ಬಳಿಕವೇ ಅದನ್ನು ಪ್ರಕಟಿಸಬೇಕು. ಇಲ್ಲದೇ ಇದ್ದರೆ ಅದು ಶಿಸ್ತಿನ ಉಲ್ಲಂಘನೆಯಾಗುತ್ತದೆ.ಅದೇ ರೀತಿ ಪ್ರಣಾಳಿಕೆ ಅನುಷ್ಠಾನ ಸಮಿತಿ ಕಾಲಕಾಲಕ್ಕೆ ಸಭೆ ಸೇರಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದ ಭರವಸೆಗಳ ಕುರಿತು ಚರ್ಚಿಸಿ ಆ ಪೈಕಿ ಯಾವ ಘೋಷಣೆಗಳನ್ನು ಯಾವ ಸಂದರ್ಭದಲ್ಲಿ ಈಡೇರಿಸಬೇಕು ಎಂಬುದನ್ನು ನಿರ್ಧರಿಸುತ್ತದೆ. ಈ ಸಮಿತಿ ಒಪ್ಪಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಅದಕ್ಕೆ ಮುನ್ನ ಸಮನ್ವಯ ಸಮಿತಿ ಸಭೆಯಲ್ಲೂ ಈ ಕುರಿತು ಚರ್ಚಿಸಬೇಕಾಗುತ್ತದೆ. ಈ ಎರಡು ಸಮಿತಿಗಳು ಸರ್ಕಾರದ ಎಲ್ಲಾ ಪ್ರಮುಖ ಕಾರ್ಯಕ್ರಮಗಳನ್ನು ನಿರ್ಧರಿಸುತ್ತವೆ. ಮುಖ್ಯಮಂತ್ರಿಯಾಗಲೀ, ಅವರ ಸಂಪುಟ ಸದಸ್ಯರಾಗಲೀ ಏಕಪಕ್ಷೀಯವಾಗಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವಂತಿಲ್ಲ. ಒಂದು ವೇಳೆ ತುರ್ತಾಗಿ ಯಾವುದಾದರೂ ತೀರ್ಮಾನ ಕೈಗೊಳ್ಳಬೇಕಾದ ಪರಿಸ್ಥಿತಿ ಬಂದರೆ ಸಮಿತಿಯ ಅಧ್ಯಕ್ಷರು ಮತ್ತು ಸಂಚಾಲಕರ ಅಭಿಪ್ರಾಯ ಪಡೆಯಲೇ ಬೇಕು. ಇಲ್ಲದೇ ಇದ್ದರೆ ಅದು ಶಿಸ್ತಿನ ಉಲ್ಲಂಘನೆಯಾಗುತ್ತದೆ.

ಕಾಂಗ್ರೆಸ್ ಅಧಿಕಾರದಲ್ಲಿರುವ ಎಲ್ಲಾ ರಾಜ್ಯಗಳಲ್ಲೂ ಸಮನ್ವಯ ಸಮಿತಿ ಮತ್ತು ಪ್ರಣಾಳಿಕೆ ಅನುಷ್ಠಾನ ಸಮಿತಿ ರಚಿಸಲಾಗುತ್ತಿದೆ. ಕೆಲವೆಡೆ ಈಗಾಗಲೇ ರಚನೆಯಾಗಿವೆ. ಹೀಗಾಗಿ ಇದರಲ್ಲಿ ತಮಗೆ ಮೂಗುದಾರ ಹಾಕುವ ಅಥವಾ ತಮ್ಮನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಪ್ರಶ್ನೆ ಬರುವುದಿಲ್ಲ.
- ಸಿದ್ದರಾಮಯ್ಯ, ಮುಖ್ಯಮಂತ್ರಿ

ಸಮನ್ವಯ ಸಮಿತಿ ಮತ್ತು ಪ್ರಣಾಳಿಕೆ ಅನುಷ್ಠಾನ ಸಮಿತಿಗೆ ಇನ್ನೊಂದು ವಾರದೊಳಗೆ ಸೋನಿಯಾ ಗಾಂಧಿ ಅವರು ಸಮ್ಮತಿ ಸೂಚಿಸಲಿದ್ದಾರೆ. ಇದನ್ನು ಸರ್ಕಾರ ಮತ್ತು ಪಕ್ಷದ ಮಧ್ಯೆ ಬಾಂಧವ್ಯ ಮೂಡಿಸಲು ರಚಿಸಲಾಗಿದೆಯೇ ಹೊರತು ಯಾರನ್ನೂ ನಿಯಂತ್ರಣದಲ್ಲಿಟ್ಟುಕೊಳ್ಳಲು ಅಲ್ಲ.
- ಡಾ.ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.