ಪ್ರಧಾನ ಸುದ್ದಿ

22 ಬ್ಯಾಂಕ್‌ಗೆ ದಂಡ

Published On :

ನವದೆಹಲಿ: ನಿಮ್ಮ ಗ್ರಾಹಕರನ್ನು ಅರಿಯಿರಿ(ಕೆವೈಸಿ) ನಿಯಮಾವಳಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರ 22 ಬ್ಯಾಂಕ್‌ಗಳಿಗೆ 50 ಲಕ್ಷದಿಂದ 3 ಕೋಟಿವರೆಗೆ ದಂಡ ವಿಧಿಸಿದೆ. ಆದರೆ, ಕಪ್ಪುಹಣವನ್ನು ಬಿಳಿ ಹಣವನ್ನಾಗಿಸುವ ದಂಧೆಯಲ್ಲಿ ಭಾಗಿಯಾದ ಕುರಿತು ಈ ಬ್ಯಾಂಕ್‌ಗಳ ವಿರುದ್ಧ ಮೇಲ್ನೋಟಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಆರ್‌ಬಿಐ ಹೇಳಿದೆ. ಹಣಕಾಸು ಅಕ್ರಮಕ್ಕೆ ಸಂಬಂಧಿಸಿ ಕೋಬ್ರಾಪೋಸ್ಟ್ ತನಿಖಾ ವರದಿ ಹಿನ್ನೆಲೆಯಲ್ಲಿ ಆರ್‌ಬಿಐ ಎಲ್ಲಾ ಬ್ಯಾಂಕ್‌ಗಳ ದಾಖಲೆಗಳ ಪರಿಶೀಲನೆ ನಡೆಸಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್, ಐಒಬಿ ಮತ್ತು ಬ್ಯಾಂಕ್ ಆಫ್ ಇಂಡಿಯಾಗೆಗೆ 3 ಕೋಟಿ, ಆಂಧ್ರ ಬ್ಯಾಂಕ್, ಪಂಜಾಬ್ ಆ್ಯಂಡ್ ಸಿಂದ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಲಕ್ಷ್ಮಿ ವಿಲಾಸ್ ಬ್ಯಾಂಕ್‌ಗೆ 2.5 ಕೋಟಿ ದಂಡ ವಿಧಿಸಿದೆ. ಬರ್ಕ್‌ಲೇಸ್ ಬ್ಯಾಂಕ್, ಬಿಎನ್‌ಪಿ ಪರಿಬಸ್, ಸಿಟಿಬ್ಯಾಂಕ್, ರಾಯಲ್ ಬ್ಯಾಂಕ್ ಆಫ್ ಸ್ಕಾಟ್‌ಲ್ಯಾಂಡ್ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್‌ಗೆ ಎಚ್ಚರಿಕೆ ಪತ್ರವನ್ನೂ ಆರ್‌ಬಿಐ  ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.