ಪ್ರಧಾನ ಸುದ್ದಿ

ಶುಕ್ಲಾ ರಾಜಿನಾಮೆ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣ ನಡೆದ ಹಿನ್ನೆಲೆಯಲ್ಲಿ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ತಮ್ಮ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ...

Published On :

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣ ನಡೆದ ಹಿನ್ನೆಲೆಯಲ್ಲಿ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ತಮ್ಮ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
ಬಿಸಿಸಿಐ ಅದ್ಯಕ್ಷ ಎನ್. ಶ್ರೀನಿವಾಸನ್ ರಾಜಿನಾಮೆ ನೀಡುವಂತೆ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲೇ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಸಿಸಿಐನ ತುರ್ತು ಕಾರ್ಯಕಾರಿ ಸಭೆ ನಡೆಯಲಿರುವ ಮುನ್ನ ದಿನವೇ ಶುಕ್ಲಾ ರಾಜಿನಾಮೆ ಸಲ್ಲಿಸಿದ್ದಾರೆ.
'ಐಪಿಎಲ್ ಮುಖ್ಯಸ್ಥ ಸ್ಥಾನಕ್ಕೆ ರಾಜಿನಾಮೆ ನೀಡಲು ನಾನು ತೀರ್ಮಾನಿಸಿದ್ದೇನೆ. ಕೆಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾನು ಈ ಕುರಿತು ವಿಚಾರ ಮಾಡುತ್ತಿದ್ದೆ. ರಾಜಿನಾಮೆ ನೀಡಲು ಇದು ಸೂಕ್ತ ಸಮಯ ಎಂದು ನನಗೆ ಅನಿಸುತ್ತಿದೆ' ಎಂದಿದ್ದಾರೆ ಶುಕ್ಲಾ.'ಬಿಸಿಸಿಐ ಕಾರ್ಯದರ್ಶಿ ಸಂಜಯ್ ಜಗದಾಳೆ ಮತ್ತು ಖಜಾಂಚಿ ಅಜಯ್ ಶಿರ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ, ಭಾರತ ಕ್ರಿಕೆಟ್‌ನ ಹಿತಾಸಕ್ತಿಯಿಂದ ನಾನು ರಾಜಿನಾಮೆ ನೀಡಿದ್ದೇನೆ' ಎಂದಿದ್ದಾರೆ.
ವಿವಾದದ ಹಿನ್ನೆಲೆಯಲ್ಲಿ ಲಲಿತ್‌ಮೊದದಿನ ನಂತರ ರಾಜಿನಾಮೆ ನೀಡುತ್ತಿರುವ ಐಪಿಎಲ್‌ನ 2ನೇ ಅದ್ಯಕ್ಷ ರಾಜೀವ್ ಶುಕ್ಲಾ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.