ಪರಮೇಶ್ವರ ಮುಂದುವರಿಕೆ
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರ ಮುಂದಿನ ನಡೆ ಏನು? ಈ ಪ್ರಶ್ನೆ ಈಗ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ....
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರ ಮುಂದಿನ ನಡೆ ಏನು?
ಈ ಪ್ರಶ್ನೆ ಈಗ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳ ಪೈಕಿ ಒಬ್ಬರಾಗಿದ್ದ ಪರಮೇಶ್ವರ ಚುನಾವಣೆಯಲ್ಲಿ ಸೋತ ನಂತರ ಅವರ ಮುಂದಿನ ಪಾತ್ರದ ಬಗ್ಗೆ ಕುತೂಹಲ ಆರಂಭಗೊಂಡಿತ್ತು.
ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯನವರ ಸಂಪುಟಕ್ಕೆ ಸೇರುವ ಮುಕ್ತ ಅವಕಾಶವನ್ನು ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ ಅವರ ಮುಂದೆ ಇಟ್ಟಿದೆ. ಅದರ ಜತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಬಹುದು ಎಂದು ಹೇಳಿದೆ.
ಈ ಪೈಕಿ ಯಾವುದನ್ನೇ ಆದರೂ ನಿಮ್ಮ ಆಯ್ಕೆಗೆ ಬಿಡುವುದಾಗಿ ಕೇಂದ್ರ ಸಚಿವ ಎ.ಕೆ. ಆಂಟನಿ ಅವರು ಪರಮೇಶ್ವರ ಅವರಿಗೆ ತಿಳಿಸಿದ್ದಾರೆ.
ಆದರೆ ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವುದಕ್ಕೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೆ. 2014ರಲ್ಲಿ ನಡೆಯುವ ಲೋಕಸಭಾ ಚುನಾವಣೆಯವರೆಗೂ ಅವರು ಕೆಪಿಸಿಸಿ ಸಾರಥ್ಯ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಚುನಾವಣೆಯಲ್ಲಿ ಸೋತರೂ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಅವರ ಶ್ರಮ ಸಾಕಷ್ಟಿದೆ. ಎಲ್ಲಕ್ಕಿಂತ ಮುಖ್ಯವಾಗಿ ದಲಿತ ಸಮುದಾಯದ ತುಷ್ಟೀಕರಣಕ್ಕಾಗಿ ಪರಮೇಶ್ವರ ಅವರಿಗೆ ಪ್ರಬಲ ಸ್ಥಾನವನ್ನು ನೀಡಬೇಕು ಎಂಬುದೂ ಹೈಕಮಾಂಡ್ ಚಿಂತನೆ. ಇದಕ್ಕೆ ಸಮ್ಮತಿ ವ್ಯಕ್ತಪಡಿಸಿರುವ ಪರಮೇಶ್ವರ ಲೋಕಸಭಾ ಚುನಾವಣೆ ಮುಗಿಯುವವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

