ಅಟಲ್ ಬರ್ತ್‌ಡೇ 'ಉತ್ತಮ ಆಡಳಿತ ದಿನ'ವನ್ನಾಗಿ ಆಚರಿಸಲು ನಿರ್ಧಾರ
ಡಿಸೆಂಬರ್ 25ನೇ ತಾರೀಖಿಗೆ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ...

ನವದೆಹಲಿ: ಡಿಸೆಂಬರ್ 25ನೇ ತಾರೀಖಿಗೆ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಅವರ ಹುಟ್ಟುಹಬ್ಬವನ್ನು ದೇಶಾದ್ಯಂತ 'ಉತ್ತಮ ಆಡಳಿತ ದಿನ'ವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದಾರೆ.
ಮಂಗಳವಾರ ನಡೆದ ಬಿಜೆಪಿ ಸಂಸದೀಯ ಸದಸ್ಯರ ಸಭೆಯಲ್ಲಿ ಮೋದಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರ ಸಚಿವಾಲಯದ ಸಚಿವ ರಾಜೀವ್ ಪ್ರತಾಪ್ ರೂಡಿ, ಡಿಸೆಂಬರ್ 25ಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುವುದು. ಉತ್ತಮ ಆಡಳಿತದ ಸಂಕೇತವಾಗಿ ಡಿ. 25ನೇ ತಾರೀಖಿನಂದು ಎಲ್ಲರೂ ಉತ್ತಮ ಆಡಳಿತಕ್ಕೆ ಸಾಥ್ ನೀಡುವ ಕಾರ್ಯಗಳನ್ನು ಮಾಡತಕ್ಕದ್ದು ಎಂದು ಮೋದಿ ಹೇಳಿರುವುದಾಗಿ ತಿಳಿಸಿದ್ದಾರೆ.
ಆ ದಿನ ಎಲ್ಲ ಸಂಸದರು ಅವರವರ ಲೋಕಸಭಾ ಕ್ಷೇತ್ರದಲ್ಲಿ ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ಪಾಲ್ಗೊಂಡು 1 ಗಂಟೆಗಳ ಕಾಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮೋದಿ ನಿರ್ದೇಶಿಸಿರುವುದಾಗಿ ರೂಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


