ಪ್ರಧಾನ ಸುದ್ದಿ

ಯೂಬರ್ ಟ್ಯಾಕ್ಸಿಗೆ ತೆಲಂಗಾಣದಲ್ಲಿ ನಿಷೇಧ

ಅತ್ಯಾಚಾರ ಪ್ರಕರಣದ ನಂತರ ರಾಜಧಾನಿ ನವದೆಹಲಿಯಲ್ಲಿ ಯೂಬರ್ ಮತ್ತು ಇತರ ಆ್ಯಪ್ ಆಧಾರಿತ ಕ್ಯಾಬ್...

ಯೂಬರ್ ಟ್ಯಾಕ್ಸಿಗೆ ತೆಲಂಗಾಣದಲ್ಲಿ ನಿಷೇಧ
ಯೂಬರ್ ಕ್ಯಾಬ್‌
Published On :

ತೆಲಂಗಾಣ: ಅತ್ಯಾಚಾರ ಪ್ರಕರಣದ ನಂತರ ರಾಜಧಾನಿ ನವದೆಹಲಿಯಲ್ಲಿ ಯೂಬರ್ ಮತ್ತು ಇತರ ಆ್ಯಪ್ ಆಧಾರಿತ ಕ್ಯಾಬ್ ಸೇವೆಗಳಿಗೆ ನಿಷೇಧ ಹೇರಿದ ಬೆನ್ನಲ್ಲೇ ತೆಲಂಗಾಣ ಸಾರಿಗೆ ಇಲಾಖೆ  ಪ್ರಸ್ತುತ ಕ್ಯಾಬ್‌ಗೆ ತೆಲಂಗಾಣ ರಾಜ್ಯದಲ್ಲಿ ನಿಷೇಧ ಹೇರಿದೆ.

ಮಂಗಳವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಖಾತೆ ಸಚಿವ ರಾಜ್‌ನಾಥ್ ಸಿಂಗ್ ಆ್ಯಪ್ ಆಧಾರಿತ ಕ್ಯಾಬ್ ಸೇವೆಗಳನ್ನು ನಿಷೇಧಿಸುವಂತೆ ಎಲ್ಲ ರಾಜ್ಯ ಹಾಗು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಂಚಾರ ವ್ಯವಸ್ಥೆ ಕಲ್ಪಿಸುತ್ತಿರುವ ಟ್ಯಾಕ್ಸಿ, ಕ್ಯಾಬ್ ಮಾಲೀಕರು/ ಚಾಲಕರು ಯಾರು ಕೂಡಾ ಯೂಬರ್ ಕಂಪನಿಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿರಬಾರದು. ಮಾತ್ರವಲ್ಲದೆ ತೆಲಂಗಾಣ ಸರ್ಕಾರದ ಸಾರಿಗೆ ಇಲಾಖೆ ಯೂಬರ್ ಕಂಪನಿಗೆ ರಾಜ್ಯದಲ್ಲಿ ಸೇವೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು  ತೆಲಂಗಾಣ ಸರ್ಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ತಮ್ಮ ಕೂಡಾ ಯೂಬರ್ ಕಂಪನಿಗೆ ಸೇರಿದ ವಾಹನಗಳನ್ನು ಬಾಡಿಗೆಗೆ ಕರೆಯುವುದಾಗಲೀ, ವೆಬ್ ಆಧಾರಿತ ಅಪ್ಲಿಕೇಷನ್‌ಗಳನ್ನು ಬಳಸುವುದಾಗಲೀ ಮಾಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.