ಬಿಹಾರದಲ್ಲಿ ೮ ಮಹಾದಲಿತರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ
ಒಬ್ಬ ಹೆಂಗಸೂ ಸೇರಿದಂತೆ ಎಂಟು ಬಡ ಮಹಾ ದಲಿತರು ಕ್ರಿಶ್ಚಿಯನ್ ಧರ್ಮಕ್ಕೆ

ಪಾಟ್ನಾ: ಒಬ್ಬ ಹೆಂಗಸೂ ಸೇರಿದಂತೆ ಎಂಟು ಬಡ ಮಹಾ ದಲಿತರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಜಿಲ್ಲಾ ಮೆಜೆಸ್ಟ್ರೇಟ್ ಅಮರೇಂದ್ರ ಪ್ರಸಾದ್ ಸಿಂಗ್ ಅವರ ಆದೇಶದ ಮೇರೆಗೆ ವಿಚಾರಣೆ ನಡೆಸಲು ಗ್ರಾಮಕ್ಕೆ ತೆರಳಿದ ಅದಿಕಾರಿಗಳಿಗೆ, "ನಾವು ಘನತೆ ಮತ್ತು ಗೌರವದಿಂದ ಬಾಳ್ವೆ ನಡೆಸಲು ಮತಾಂತರವಾಗಿದ್ದೇವೆ" ಎಂದು ಮತಾಂತರಗೊಂಡವರು ತಿಳಿಸಿದರು ಎಂದಿದ್ದಾರೆ.
ಮತಾಂತರಗೊಂಡವರಲ್ಲಿ ಒಬ್ಬರಾದ ಪ್ರಕಾಶ್ ಮಂಝಿ ತನ್ನ ತಾಯಿಯ ಕೊನೆಯ ವಿಧಿಗಳನ್ನು ಕ್ರಿಶ್ಚಿಯನ್ ಧರ್ಮದ ಪ್ರಕಾರ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾಗಲ್ ಪುರ ಜಿಲ್ಲೆಯ ಗ್ರಾಮಗಳಲ್ಲಿ ಎರಡು ದಿನಗಳ ಹಿಂದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಸುಮಾರು ೩೬ ಹಿಂದೂಗಳು, ಸಾಮಾಜಿಕ ಬಹಿಷ್ಕಾರದ ಬೆದರಿಕೆಗೆ ಹೆದರಿ ತಮ್ಮ ಧರ್ಮಕ್ಕೆ ವಾಪಸ್ ಬಂದಿದ್ದರು ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


