ಒಮರ್ ಅಬ್ದುಲ್ಲಾಗೆ ಒಂದು ಕಡೆ ಸೋಲು, ಮತ್ತೊಂದು ಕಡೆ ಗೆಲುವು
ಸೋಲಿನ ಭೀತಿಯಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು...

ಶ್ರೀನಗರ: ಸೋಲಿನ ಭೀತಿಯಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒಂದು ಕಡೆ ಸೋತು ಮತ್ತೊಂದು ಕಡೆ ಗೆಲುವು ಸಾಧಿಸಿದ್ದಾರೆ.
ಸೋನಾವರ್ ಮತ್ತು ಬೀರ್ವಾಲ್ ವಿಧಾನಸಭಾ ಕ್ಷೇತ್ರದಿಂದ ಒಮರ್ ಅಬ್ದುಲ್ಲಾ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಿದ್ದು, ಸೋನಾವರ್ ಕ್ಷೇತ್ರದಲ್ಲಿ ಪಿಡಿಪಿ ಅಭ್ಯರ್ಥಿ ಮೊಹ್ಮದ್ ಅಶ್ರಫ್ ವಿರುದ್ಧ 4783 ಮತಗಳ ಅಂತರಿಂದ ಹೀನಾಯ ಸೋಲು ಅನುಭವಿಸಿದ್ದಾರೆ.
ಇದೀಗ ಬಂದ ಮಾಹಿತಿಯ ಪ್ರಕಾರ, ಒಮರ್ ಅಬ್ದುಲ್ಲಾ ಅವರು ಬೀರ್ವಾಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ವಿರುದ್ಧ 1 ಸಾವಿರ ಮತಗಳ ಅತಿ ಕಡಿಮೆ ಅಂತರದಿಂದ ಸಾಧಿಸಿದ್ದಾರೆ. ಈ ಮುಂಚೆ ಒಮರ್ ಅಬ್ದುಲ್ಲಾ ಅವರು ನಜೀರ್ ಅಹ್ಮದ್ ವಿರುದ್ಧ 131 ಮತಗಳ ಅಂತರಿಂದ ಸೋಲು ಅನುಭವಿಸಿದ್ದಾರೆ ಎಂದು ವರದಿ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


