ಪ್ರಧಾನ ಸುದ್ದಿ

ಜಾರ್ಖಂಡ್, ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚನೆ: ರಾಜನಾಥ್ ಸಿಂಗ್

ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರ ಎರಡು...

ಜಾರ್ಖಂಡ್, ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚನೆ: ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Published On :

ನವದೆಹಲಿ: ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರ ಎರಡು ರಾಜ್ಯದಲ್ಲೂ ಭಾರತೀಯ ಜನತಾ ಪಕ್ಷ(ಬಿಜೆಪಿ) ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಗ್ಗೆ ಸಂಸತ್ ಭವನದ ಹೊರಗಡೆ ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಜಾರ್ಖಂಡ್ ಮತ್ತು ಕಾಶ್ಮೀರ ಎರಡು ರಾಜ್ಯಗಳಲ್ಲೂ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ನಲ್ಲಿ ಪಕ್ಷ ಮುನ್ನಡೆ ಸಾಧಿಸುತ್ತಿದ್ದಂತೆ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದು, ಜಾರ್ಖಂಡ್‌ನಲ್ಲಿ ಸ್ವಂತ ಬಲದ ಮೇಲೆ ಹಾಗೂ ಕಾಶ್ಮೀರದಲ್ಲಿ ಪಿಡಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸುವ ಮುನ್ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.