ಪ್ರಧಾನ ಸುದ್ದಿ

ಜಾರ್ಖಂಡ್‌ನಲ್ಲಿ ಬಿಜೆಪಿಗೆ ಬಹುಮತ: ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ

ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶದ ಸದ್ಯದ ಸ್ಥಿತಿಗತಿ...

ಜಾರ್ಖಂಡ್‌ನಲ್ಲಿ ಬಿಜೆಪಿಗೆ ಬಹುಮತ: ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ
Published On :

ಶ್ರೀನಗರ/ರಾಂಚಿ: ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶದ ಸದ್ಯದ ಸ್ಥಿತಿಗತಿಯನ್ನು ಗಮನಿಸಿದರೆ ಜಾರ್ಖಂಡ್‌ನಲ್ಲಿ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಇದ್ದು, ಕಣಿವೆ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ.

ಜಾರ್ಖಂಡ್‌ನಲ್ಲಿ 81 ಸ್ಥಾನಗಳ ಪೈಕಿ ಬಿಜೆಪಿ 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿದೆ. ಇನ್ನು ಆಡಳಿತರೂಢ ಜೆಎಂಎಂ 17 ಹಾಗೂ ಕಾಂಗ್ರೆಸ್ 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಜೆವಿಎಂ 6 ಹಾಗೂ ಇತರರು 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ 11 ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದ ಬಿಜೆಪಿ ಈ ಬಾರಿ 26 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಪಿಡಿಪಿ ಕಣಿವೆ ರಾಜ್ಯದಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಆದರೆ ಪಿಡಿಪಿಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಕಡಿಮೆ ಇದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ.

ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಸಿದ್ಧ
ಜಮ್ಮು ಮತ್ತು ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ನಾವು ಸಿದ್ಧ ಎಂದು ಪಿಡಿಪಿ ವಕ್ತಾರ ನಹೀಮ್ ಅಖ್ತರ್ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಎನ್‌ಸಿಪಿ ರಾಜ್ಯವನ್ನು ಲೂಟಿ ಮಾಡಿವೆ ಎಂದು ಆರೋಪಿಸಿರುವ ಅಖ್ತರ್, ದೆಹಲಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಉತ್ತಮ ಸರ್ಕಾರ ಇದೆ. ಹೀಗಾಗಿ ರಾಜ್ಯದಲ್ಲೂ ಉತ್ತಮ ಹಾಗೂ ಸ್ಥಿರ ಸರ್ಕಾರ ನೀಡುವುದಕ್ಕಾಗಿ ಪಿಡಿಪಿ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.