ಪ್ರಧಾನ ಸುದ್ದಿ

ಮುಂದಿನ ತಿಂಗಳು ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ

ಭಾರತೀಯ ಜನತಾ ಪಕ್ಷ(ಬಿಜೆಪಿ) ಈ ಬಾರಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು,...

ಮುಂದಿನ ತಿಂಗಳು ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ
Published On :

ನವದೆಹಲಿ: ಭಾರತೀಯ(ಬಿಜೆಪಿ) ಈ ಬಾರಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು, ಜನವರಿ 17 ಮತ್ತು 18ರಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಸಭೆ ನಿಗದಿ ಪಡಿಸಲಾಗಿದೆ. ಜನತಾ ಪಕ್ಷ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೆಹಲಿಯಿಂದ ಹೊರಗಡೆ ನಡೆಯುತ್ತಿರುವ ಮೊದಲ ಬಿಜೆಪಿ ಕಾರ್ಯಕಾರಣಿ ಸಭೆ ಇದಾಗಿದ್ದು, ಜನವರಿ 16ರಂದು ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಹಾಗೂ 17 ಮತ್ತು 18ರಂದು ಕಾರ್ಯಕಾರಣಿ ಸಭೆ ನಡೆಯಲಿದೆ.

ಈ ಸಂಬಂಧ ಜ.3ಕ್ಕೆ ನಗರಕ್ಕೆ ಆಗಮಿಸುತ್ತಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಕಾರ್ಯಕಾರಣಿ ಸಭೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ನಾಯಕರು ಈ ಕಾರ್ಯಕಾರಣಿಯಲ್ಲಿ ಭಾಗವಹಿಸುತ್ತಿದ್ದು, ಸಭೆಯಲ್ಲಿ ದಕ್ಷಿಣ ಭಾರತದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಈ ಹಿಂದೆ 2008, ಸೆಪ್ಟೆಂಬರ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.