ಜಮ್ಮು ಕಾಶ್ಮೀರ ಸರ್ಕಾರ ರಚನೆ: ಬಿಜೆಪಿ-ಪಿಡಿಪಿ ಮೈತ್ರಿ?
ಭಾರತೀಯ ಜನತಾ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ...

ಶ್ರೀನಗರ: ಭಾರತೀಯ ಜನತಾ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸ್ಪಷ್ಟನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಜಮ್ಮುನಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬೇಕಾದರೆ ಪಿಡಿಪಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇನ್ನಷ್ಟು ಹೆಚ್ಚಿದೆ.
87 ಸದಸ್ಯರಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಪಿಡಿಪಿ 28 ಮತ್ತು ಬಿಜೆಪಿ 25 ಸೀಟುಗಳನ್ನು ಗೆದ್ದುಕೊಂಡಿತ್ತು. ಅದೇ ವೇಳೆ ಎನ್‌ಸಿ 15 , ಕಾಂಗ್ರೆಸ್ 12 ಮತ್ತು ಇತರರು 7 ಸೀಟು ಗಳಿಸಿಕೊಂಡಿತ್ತು.
ಗುರುವಾರ ಸಂಜೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿಡಿಪಿಯ ಹಿರಿಯ ನಾಯಕ ಮುಜಾಫರ್ ಹುಸೇನ್ ಬೇಗ್ ಅವರ ಜತೆ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ.ಇದಾದ ನಂತರ ರಾಮ್ ಮಾಧವ್ ಜಮ್ಮು ಕಣಿವೆಯಲ್ಲಿರುವ ಇತರ ಪಕ್ಷದ ನಾಯಕರನ್ನೂ ಭೇಟಿ ಮಾಡಿದ್ದಾರೆ.
ಆದಾಗ್ಯೂ, ತಮ್ಮ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಹೊಂದುವ ಬಗ್ಗೆ ಯೋಚಿಸುತ್ತಿದೆ ಎಂದು ಪಿಡಿಪಿ ವಕ್ತಾರ ಸಮೀರ್ ಕೌಲ್ ಹೇಳಿದ್ದಾರೆ. ಜಮ್ಮುವಿನಲ್ಲಿ ಸರ್ಕಾರ ರಚನೆ ಬಗ್ಗೆ ಬಿಜೆಪಿ ಜತೆ ಮಾತುಕತೆ ನಡೆದು ಬರುತ್ತಿದೆ. ಈ ಬಗ್ಗೆ ಸ್ಪಷ್ಟ ತೀರ್ಮಾನ ತೆಗೆದುಕೊಂಡಿಲ್ಲ. ನಾವು ಯಾವುದೇ ಪ್ರಕಟಣೆ ನೀಡಲು ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ಕೌಲ್ ಹೇಳಿದ್ದಾರೆ.
ಒಂದು ವೇಳೆ ಮೈತ್ರಿ ಸರ್ಕಾರ ಬಂದರೆ ಸರದಿ ಮೂಲಕ ಮುಖ್ಯಮಂತ್ರಿ ಸ್ಥಾನ ನೀಡಲಾಗುವುದೇ? ಎಂಬ ಪ್ರಶ್ನೆಗೆ ಉತ್ತರಿಸಿದ ಪಿಡಿಪಿ, ಸದ್ಯ ಈ ಬಗ್ಗೆ ಏನೂ ಚಿಂತಿಸಿಲ್ಲ ಎಂದಿದೆ.
ಇತ್ತ ಬಿಜೆಪಿ ನಾಯಕ ಮತ್ತು ಪ್ರಧಾನಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರನ್ನು ಶುಕ್ರವಾರ ಬಿಜೆಪಿಯ ರಾಜ್ಯ ಶಾಸಕರ ಮುಖಂಡನಾಗಿ ನೇಮಕ ಮಾಡಲಾಗುವುದು ಎಂದು ಬಲ್ಲಮೂಲಗಳು ವರದಿ ಮಾಡಿವೆ.
ಏತನ್ಮಧ್ಯೆ, ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಜಿತೇಂದ್ರ ಸಿಂಗ್ ಅವರು ಕಾಶ್ಮೀರದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


